Petrol Diesel Price: ಸ್ಥಿರತೆ ಕಾಪಾಡಿಕೊಂಡ ಪೆಟ್ರೋಲ್, ಡೀಸೆಲ್.. ಹೀಗಿದೆ ಇಂದಿನ ದರ!
Petrol Diesel Rate in Bangalore: ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮಾರ್ಚ್ ತಿಂಗಳ ಪ್ರಾರಂಭದಿಂದ ಸ್ಥಿರತೆ ಕಾಪಾಡಿಕೊಂಡು ಬಂದ ಇಂಧನ ದರ ಇಂದೂ ಅದೇ ದರದಲ್ಲಿ ಮಾರಾಟವಾಗುತ್ತಿದೆ. ಎಷ್ಟಿದೆ ದರ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಇಂದು ಗುರುವಾರ ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಮಾರ್ಚ್ ತಿಂಗಳ ಪ್ರಾರಂಭದಿಂದಲೂ ಇಂಧನ ದರ ಸ್ಥಿರವಾಗಿದೆ. ಕೊನೆಯ ಬಾರಿ ಫೆಬ್ರವರಿ 27ರಂದು ಪೆಟ್ರೋಲ್, ಡೀಸೆಲ್ ದರ ಏರಿಕೆಯ ನಂತರ ದರ ವ್ಯತ್ಯಾಸ ಕಂಡುಬಂದಿಲ್ಲ.
ಇಂಧನ ದರ ಏರಿಕೆಯತ್ತಲೇ ಸಾಗುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದ ಗ್ರಾಹಕರು ಸಿಟ್ಟಿಗೆದ್ದಿದ್ದರು. ಇದರ ಜೊತೆಗೆ ಸಿಲಿಂಡರ್ ಗ್ಯಾಸ್ ದರವೂ ಏರಿಕೆಯತ್ತ ಸಾಗಿರುವುದು ಸಾಮಾನ್ಯ ಜನರ ಕೆಂಗಣ್ಣಿಗೆ ಕಾರಣವಾಗಿತ್ತು. ಇದೀಗ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿರುವುದು ಗ್ರಾಹಕರಿಗೆ ಸ್ವಲ್ಪ ನಿರಾಳದ ಸಂಗತಿ. ಆದರೆ ಬೇಸರದ ಸಂಗತಿ ಎಂದರೆ, ಪೆಟ್ರೋಕೆಮಿಕಲ್ ಉತ್ಪನ್ನವನ್ನು ಜಿಎಸ್ಟಿಯ ವ್ಯಾಪ್ತಿಗೆ ತರುವ ಭರವಸೆ ಮುಸುಕಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಯೋಜನೆ ಇಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ.
ಇಂದು ಬೆಂಗಳೂರಿನ ಗ್ರಾಹಕರು ಪ್ರತಿ ಲೀಟರ್ ಪೆಟ್ರೋಲ್ಅನ್ನು 94.22 ರೂಪಾಯಿಗೆ ಕೊಳ್ಳುತ್ತಿದ್ದಾರೆ. ಡೀಸೆಲ್ ದರ 86.37 ರೂಪಾಯಿಗೆ ಮಾರಾಟವಾಗುತ್ತಿದೆ. ಸತತವಾಗಿ 19ನೇ ದಿನ ಕೂಡಾ ಪೆಟ್ರೋಲ್, ಡೀಸೆಲ್ ಸ್ಥಿರತೆ ಕಾಪಾಡಿಕೊಂಡಿದೆ. ದೇಶದಲ್ಲಿ ಇಂಧನ ದರ ಏರಿಕೆಯಿಂದಾಗಿ ಬೇಡಿಕೆಯೂ ಸಹ ಕಡಿಮೆಯಾಗಿದೆ ಎಂದು ಬಲ್ಲವರು ಅಭಿಪ್ರಾಯ ಪಟ್ಟಿದ್ದಾರೆ.
ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆ ಸ್ಥಗಿತಗೊಳಿಸಲಾಗಿದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಇಂಧನ ಬೆಲೆ ಏರಿಕೆ ಸ್ಥಗಿತಗೊಂಡಿದ್ದು, ದರ ಸ್ಥಿರವಾಗಿದೆ. ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ಪುದುಚೆರಿಯಲ್ಲಿ ನಡೆಯಲಿರುವ ಚುನಾವಣೆಯ ನಿಟ್ಟಿನಲ್ಲಿ ದರ ಬದಲಾವಣೆಯಾಗಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.
ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 91.17 ರೂಪಾಯಿಗೆ ಮಾರಾಟವಾಗಿತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗರಿಷ್ಠ ಮಟ್ಟ ತಲುಪಿದ್ದು 97.57 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು 93.11 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 91.35 ರೂಪಾಯಿಗೆ ಮಾರಾಟವಾಗುತ್ತಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು 89.38 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ.
ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಇಂದು 81.47 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 88.60 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 84.35 ರೂಪಾಯಿ ಹಾಗೂ ಚೆನ್ನೈನಲ್ಲಿ ಪ್ರತಿ ಲೀಟರ್ ಡೀಸೆಲ್ 86.45 ರೂಪಾಯಿಗೆ ಮಾರಾಟವಾಗುತ್ತಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಡೀಸೆಲ್ 81.91 ರೂಪಾಯಿಗೆ ಮಾರಾಟವಾಗುತ್ತಿದೆ.
ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.79 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 88.86 ರೂಪಾಯಿಗೆ ಮಾರಾಟವಾಗುತ್ತಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಪೆಟ್ರೋಲ್ ದರ ಏರಿಕೆ ಕಂಡಿದೆ. ದರ ಏರಿಕೆಯ ನಂತರ ಪ್ರತಿ ಲೀಟರ್ ಪೆಟ್ರೋಲ್ 97.39 ರೂಪಾಯಿಗೆ ಜಿಗಿದಿದೆ. ಹಾಗೂ ಡೀಸೆಲ್ ದರ ಪ್ರತಿ ಲೀಟರಿಗೆ 90.91 ರೂಪಾಯಿಗೆ ಜಿಗಿದಿದೆ.
ಗರಿಷ್ಠ ಮಟ್ಟ ತಲುಪಿದ ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದ್ದು ಈಗಾಗಲೇ ತಿಳಿದಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 25 ಪೈಸೆ ಹೆಚ್ಚಳದೊಂದಿಗೆ ದರ 100.13 ರೂಪಾಯಿ ತಲುಪಿತ್ತು. ಡೀಸೆಲ್ ದರ 92.13 ರೂಪಾಯಿಗೆ ಮಾರಾಟವಾಗುತ್ತಿತ್ತು. ಡೀಸೆಲ್ ಕೂಡಾ ಶತಕ ಭಾರಿಸುವ ಹಾದಿಯಲ್ಲಿ ಸಾಗುತ್ತಿತ್ತು.
ಇದನ್ನೂ ಓದಿ: Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ
ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಪೆಟ್ರೋಲ್ ದರದಲ್ಲಿ ಯಾವ ಇಳಿಕೆಯೂ ಆಗಲಿಲ್ಲ; ಇಂದು ರಾಜ್ಯದಲ್ಲಿ ರೂ. 96ರ ಗಡಿಯಲ್ಲಿ ಪೆಟ್ರೋಲ್ ಬೆಲೆ
Published On - 9:18 am, Thu, 18 March 21