ಬೆಂಗಳೂರು: ಪೆಟ್ರೋಲ್ ದರ ಏರಿಕೆ ಕಾಣದಿರುವುದರಿಂದ ಗ್ರಾಹಕರು ನಿರಾಳರಾಗಿದ್ದಂತೂ ನಿಜ. ಚುನಾವಣೆ ಎದುರಿಗಿರುವುದರಿಂದ ಇಂಧನ ದರ ಏರುತ್ತಿಲ್ಲ ಎಂಬ ಮಾತುಗಳು ಹರಿದಾಡುತ್ತಿವೆ. ಪೆಟ್ರೋಲ್ ದರ ಇದೀಗ ಸ್ಥಿರವಾಗಿರುವುದು ಚುನಾವಣೆಯ ನಂತರ ಏರುವುದೇ ಎಂಬ ಚಿಂತೆಯೂ ಗ್ರಾಹಕರಲ್ಲಿ ಮನೆ ಮಾಡಿದೆ. ಇಂಧನ ದರ ವ್ಯತ್ಯಾಸವನ್ನು ಚುನಾವಣೆಯ ನಂತರ ಕಾದು ನೋಡಬೇಕಿದೆ.
ಇದೀಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.22 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಡೀಸೆಲ್ ದರ 86.37 ರೂಪಾಯಿಗೆ ಮಾರಾಟವಾಗುತ್ತಿದೆ. ಸತತವಾಗಿ 20ನೇ ದಿನ ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾದ ನಂತರದಿಂದ ಇಂಧನ ಬೆಲೆ ಏರಿಕೆ ಸ್ಥಗಿತಗೊಂಡಿದೆ. ಮೆಟ್ರೋ ನಗರಗಳಾದ ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 91.17 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗರಿಷ್ಠ ಮಟ್ಟ ತಲುಪಿದ್ದು 97.57 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು 93.11 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 91.35 ರೂಪಾಯಿಗೆ ಮಾರಾಟವಾಗುತ್ತಿದೆ.
ಕೊನೆಯದಾಗಿ ಫೆಬ್ರವರಿ 27ರಂದು ಪೆಟ್ರೋಲ್ ಡೀಸೆಲ್ ಬದಲಾದ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆಗ ಪ್ರತಿ ಲೀಟರ್ ಪೆಟ್ರೋಲ್ಅನ್ನು 24 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರವನ್ನು 15 ಪೈಸೆ ಏರಿಕೆ ಮಾಡಲಾಗಿತ್ತು.
ಇನ್ನು, ಪುಣೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.21 ರೂಪಾಯಿಗೆ ಮಾರಾಟವಾಗುತ್ತಿದೆ. ಪ್ರತಿ ಲೀಟರ್ ಡೀಸೆಲ್ಅನ್ನು 86.90 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಪಂಜಾಬ್ ರಾಜ್ಯದ ಮೊಹಾಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 93.05 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್ ಡೀಸೆಲ್ ದರ 84.03 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಟನ್ನು 89.111 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್ ಡೀಸೆಲ್ 82.05 ರೂಪಾಯಿಗೆ ಮಾರಾಟವಾಗುತ್ತಿದೆ.
Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ
Published On - 9:34 am, Fri, 19 March 21