Petrol Diesel Price: ಮಾರ್ಚ್ ತಿಂಗಳ ಕೊನೆಯ ವಾರವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯ!
Petrol Diesel Rate in Bangalore: ಮಾರ್ಚ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿಯೇ ಉಳಿದಿದೆ. ಇಂದುಸೋಮವಾರವೂ ದರ ವ್ಯತ್ಯಾಸವಿಲ್ಲ.
ಬೆಂಗಳೂರು: ಇಂದು ಸೋಮವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟವಾಗುತ್ತಿದೆ. ಮಾರ್ಚ್ ತಿಂಗಳ ಪ್ರಾರಂಭದಿಂದ ಪೆಟ್ರೋಲ್, ಡೀಸೆಲ್ ದರ ವ್ಯತ್ಯಾಸವಾಗಿಲ್ಲ. ಕಳೆದ ಫೆಬ್ರವರಿ ತಿಂಗಳ 27ನೇ ತಾರೀಕಿನಂದು ಪೆಟ್ರೋಲ್ ಪ್ರತಿ ಲೀಟರಿಗೆ 24 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 15 ಪೈಸೆ ಹೆಚ್ಚಳವಾಗಿತ್ತು. ಇಂದು ಸೋಮವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.22ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 86.37 ರೂಪಾಯಿಗೆ ಮಾರಾಟವಾಗುತ್ತಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 91.17 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 81.47 ರೂಪಾಯಿಗೆ ಮಾರಾಟವಾಗುತ್ತಿದೆ. ಈ ವರ್ಷದ ಮೊದಲ 2 ತಿಂಗಳಿನಲ್ಲಿ ಪೆಟ್ರೋಲ್ 4.87 ರೂಪಾಯಿ ಏರಿಕೆಯಾಗಿದೆ. ಮತ್ತು ಡೀಸೆಲ್ 4.99 ರೂಪಾಯಿ ಏರಿಕೆ ಕಂಡಿದೆ. ಇಂಧನ ದರ ರಾಜ್ಯದಿಂದ ರಾಜ್ಯಕ್ಕೆ ಬದಲಾಗಿರುತ್ತದೆ. ಸರಕು ಸಾಗಣೆ ಶುಲ್ಕಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಆಧಾರದ ಮೇಲೆ ಇಂಧನ ದರ ಭಿನ್ನವಾಗಿರುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ತೆರಿಗೆಗಳು ಪೆಟ್ರೋಲ್ಗೆ ಶೇ.60 ಹಾಗೂ ಡೀಸೆಲ್ಗೆ ಶೇ.54ಕ್ಕಿಂತ ಹೆಚ್ಚಿದೆ. ಅಂತರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ದರವನ್ನು ಸಾಮಾನ್ಯವಾಗಿ ಪ್ರತಿ ದಿನವೂ ಪರಿಷ್ಕರಿಸಲಾಗುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶುಕ್ರವಾರ ಏರಿಕೆಯಾಗಿದೆ. ಕಚ್ಚಾ ತೈಲದ ದರ ಏರಿಕೆ ಕಂಡು ಬರುತ್ತಿದ್ದರೂ. ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ಇಂಧನ ಬೇಡಿಕೆ ಕಡಿಮೆ ಆಗಿತ್ತು. ಜೊತೆಗೆ, ಕೊರೊನಾ ಎರಡನೇ ಅಲೆ ಎಲ್ಲೆಡೆ ವ್ಯಾಪಿಸುತ್ತಿರುವುದರಿಂದ ಬೇಡಿಕೆ ಇನ್ನೂ ಕಡಿಮೆ ಆಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಶ್ರೀಗಂಗನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.84 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಡೀಸೆಲ್ಅನ್ನು ಪ್ರತಿ ಲೀಟರಿಗೆ 93.77 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಅನುಪ್ಪುರಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.59 ರೂಪಾಯಿಗೆ ಮಾರಾಟವಾಗುತ್ತಿದೆ. ಮತ್ತು ಡೀಸೆಲ್ ಪ್ರತಿ ಲೀಟರಿಗೆ 91.97 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್, 97.57 ರೂಪಾಯಿ ಇದೆ. ಹಾಗೂ ಡೀಸೆಲ್ ಪ್ರತಿ ಲೀಟರಿಗೆ 88.60 ರೂಪಾಯಿಗೆ ಮಾರಾಟವಾಗುತ್ತಿದೆ.
ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 91.35ರೂಪಾಯಿ ಹಾಗೂ ಪ್ರತಿ ಲೀಟರ್ಡೀಸೆಲ್ ದರ 84.35 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.11 ರೂಪಾಯಿ ಹಾಗೂ ಡೀಸೆಲ್ ದರ 86.45 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.79 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 88.86 ಇದೆ.
ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.48 ರೂಪಾಯಿ ಹಾಗೂ ಪ್ರತಿ ಲೀಟರ್ ಪೆಟ್ರೋಲ್ ದರ 86.73 ರೂಪಾಯಿ ಇದೆ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.72 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 89.98 ರೂಪಾಯಿ ಇದೆ. ಇನ್ನು, ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 89.31 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.85 ರೂಪಾಯಿ ಇದೆ. ತಿವನಂತಪುರಂನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.05 ಹಾಗೂ ಪ್ರತಿ ಲೀಟರ್ ಡೀಸೆಲ್ 87.53 ರೂಪಾಯಿ ಇದೆ.
ಇದನ್ನೂ ಓದಿ: Petrol Diesel Price: ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ!
ಇಂದಿಗೆ ಪೆಟ್ರೋಲ್ ಬೆಲೆ ಶತಕ ಬಾರಿಸಬೇಕಿತ್ತು! ಆದ್ರೆ ನಿಶ್ಚಲವಾಗಿ ನಿಂತುಬಿಟ್ಟಿದೆ. ಏನಿದರ ರಾಜಕೀಯ? ಇಲ್ಲಿದೆ ವಿವರ
Published On - 9:35 am, Mon, 22 March 21