ದೆಹಲಿ: ಸರ್ಕಾರಿ ತೈಲ ಕಂಪನಿಗಳು ಪರಿಷ್ಕೃತ ತೈಲ ದರಗಳ ಮಾಹಿತಿ ನಿಗದಿ ಮಾಡಿದೆ. ಆದರೆ ಪೆಟ್ರೋಲಿಯಂ ಕಂಪನಿಗಳು ವಾರದ ಕೊನೆಯ ದಿನವಾದ ಇಂದು (ಮೇ 22) ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಹೀಗಾಗಿ ದೆಹಲಿಯಲ್ಲಿ ಇಂದು ಕೂಡ ಪೆಟ್ರೋಲ್ ದರ ಲೀಟರ್‌ಗೆ 93.04 ರೂಪಾಯಿಯಾಗಿದ್ದು, ಡಿಸೇಲ್ ಬೆಲೆ ಲೀಟರ್‌ಗೆ 83.80ರೂಪಾಯಿ ಆಗಿದೆ. ಆ ಮೂಲಕ ನಗರಗಳಲ್ಲಿ ಇಂಧನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಮಧ್ಯಂತರ ಮಟ್ಟದಲ್ಲಿ ಹೆಚ್ಚುತ್ತಿವೆ ಎನ್ನುವುದನ್ನು ನಾವು ಗಮನಿಸಬಹುದು.
ಕಳೆದ 12 ದಿನಗಳಲ್ಲಿ ಪೆಟ್ರೋಲ್ 2.69 ರೂ. ಮತ್ತು ಡೀಸೆಲ್ 3.07 ರೂ. ಏರಿಕೆ
ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚುತ್ತಿದೆ. ಪೆಟ್ರೋಲ್ ಕಳೆದ 12 ದಿನಗಳಲ್ಲಿ ಪ್ರತಿ ಲೀಟರ್‌ಗೆ 2.69 ರೂ. ಹೆಚ್ಚಾಗಿದ್ದು, ಈ ಅವಧಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 3.07 ರೂ.ಗಳಷ್ಟು ಹೆಚ್ಚಾಗಿದೆ.
ಮೇ 22 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.14 ರೂ. ಮತ್ತು ಡೀಸೆಲ್ ಲೀಟರ್‌ಗೆ 88.84 ರೂ. ಆಗಿದೆ. ಇನ್ನು
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 99.32 ರೂ. ಮತ್ತು ಡೀಸೆಲ್ ಲೀಟರ್‌ಗೆ 91.01 ರೂ. ಆಗಿದ್ದು, ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.71 ರೂ. ಮತ್ತು ಡೀಸೆಲ್ ಲೀಟರ್‌ಗೆ 88.62 ರೂಪಾಯಿ, ಕೋಲ್ಕತ್ತಾದ ಪೆಟ್ರೋಲ್ ಬೆಲೆ ಲೀಟರ್‌ಗೆ 93.11 ಮತ್ತು ಡೀಸೆಲ್ ಲೀಟರ್‌ಗೆ 86.64 ರೂಪಾಯಿ, ಭೋಪಾಲ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.11 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.21 ರೂಪಾಯಿ, ಲಖನೌದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.72 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 84.18 ರೂಪಾಯಿ, ಪಾಟ್ನಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 95.23 ರೂ. ಮತ್ತು ಡೀಸೆಲ್ ಲೀಟರ್‌ಗೆ 89.05 ರೂಪಾಯಿ, ರಾಂಚಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 89.93 ರೂ. ಮತ್ತು ಡೀಸೆಲ್ ಲೀಟರ್‌ಗೆ 88.50 ರೂಪಾಯಿ. ಜೈಪುರದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 99.50 ರೂ. ಮತ್ತು ಡೀಸೆಲ್ ಲೀಟರ್‌ಗೆ 92.49 ರೂಪಾಯಿ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಬದಲಾಗುತ್ತದೆ
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತದೆ. ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದ ಅನ್ವಯವಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಸುಂಕಗಳನ್ನು ಸೇರಿಸಿದ ನಂತರದಲ್ಲಿ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಎಷ್ಟು ಎಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತದೆ.
ಇದನ್ನೂ ಓದಿ:
Published On - 11:05 am, Sat, 22 May 21