AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಇಂದು ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ…

ದೆಹಲಿ: ಬೆಂಗಳೂರು ಸೇರಿ ಇತರ ಯಾವುದೇ ಪ್ರಮುಖ ನಗರಗಳಲ್ಲೂ ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಏಪ್ರಿಲ್​ 15ರಂದು ಇಳಿಕೆಯಾದ ಮೇಲೆ ಪೆಟ್ರೋಲ್​-ಡೀಸೆಲ್​ ಬೆಲೆ ಕಳೆದ ಮೂರು ದಿನಗಳಿಂದ ಹೀಗೆ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳು ದುಬಾರಿಯಾಗುತ್ತಿದ್ದು ಪ್ರಸ್ತುತ ಬ್ಯಾರೆಲ್​ಗೆ 67 ಡಾಲರ್​ ಬೆಲೆ ಹೊಂದಿವೆ. ದೇಶೀಯ ತೈಲ ಕಂಪನಿಗಳು ಕಳೆದ ಕೆಲವು ದಿನಗಳಿಂದಲೂ ಪೆಟ್ರೋಲ್-ಡೀಸೆಲ್​ಗಳ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಮಾರ್ಚ್​ 30ರಂದು ಪೆಟ್ರೋಲ್-ಡೀಸೆಲ್​ ಬೆಲೆಯಲ್ಲಿ ಕಡಿತವಾಗಿತ್ತು. ಏಪ್ರಿಲ್​ 15ಕ್ಕೂ ಮೊದಲು, […]

Petrol Diesel Price: ಇಂದು ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ...
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 18, 2021 | 11:45 AM

Share

ದೆಹಲಿ: ಬೆಂಗಳೂರು ಸೇರಿ ಇತರ ಯಾವುದೇ ಪ್ರಮುಖ ನಗರಗಳಲ್ಲೂ ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಏಪ್ರಿಲ್​ 15ರಂದು ಇಳಿಕೆಯಾದ ಮೇಲೆ ಪೆಟ್ರೋಲ್​-ಡೀಸೆಲ್​ ಬೆಲೆ ಕಳೆದ ಮೂರು ದಿನಗಳಿಂದ ಹೀಗೆ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳು ದುಬಾರಿಯಾಗುತ್ತಿದ್ದು ಪ್ರಸ್ತುತ ಬ್ಯಾರೆಲ್​ಗೆ 67 ಡಾಲರ್​ ಬೆಲೆ ಹೊಂದಿವೆ. ದೇಶೀಯ ತೈಲ ಕಂಪನಿಗಳು ಕಳೆದ ಕೆಲವು ದಿನಗಳಿಂದಲೂ ಪೆಟ್ರೋಲ್-ಡೀಸೆಲ್​ಗಳ ಬೆಲೆಯಲ್ಲಿ ಏರಿಕೆ ಮಾಡಿಲ್ಲ.

ಮಾರ್ಚ್​ 30ರಂದು ಪೆಟ್ರೋಲ್-ಡೀಸೆಲ್​ ಬೆಲೆಯಲ್ಲಿ ಕಡಿತವಾಗಿತ್ತು. ಏಪ್ರಿಲ್​ 15ಕ್ಕೂ ಮೊದಲು, ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಕೊನೇ ಬಾರಿಗೆ ಬದಲಾವಣೆ ಆಗಿದ್ದು ಮಾರ್ಚ್​ 30ರಂದು. ನಂತರ ಏಪ್ರಿಲ್​ 15ರಂದು ತುಸು ಕಡಿಮೆಯಾಗಿತ್ತು. ಮಾರ್ಚ್​ನಲ್ಲಿ ಪೆಟ್ರೋಲ್​ ಬೆಲೆಯಲ್ಲಿ 61 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 60 ಪೈಸೆ ಕಡಿಮೆಯಾಗಿತ್ತು. ಮಾರ್ಚ್​ನಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಕಡಿಮೆಯಾಗಿತ್ತು. ಅದಕ್ಕೂ ಮೊದಲು ಫೆಬ್ರವರಿಯಲ್ಲಿ ಒಟ್ಟು 18 ಬಾರಿ ಏರಿಕೆಯಾಗಿದೆ.

ವಿವಿಧ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್​ ದರ ಹೀಗಿದೆ:

ನಗರ                          ಪೆಟ್ರೋಲ್​ ದರ(ಪ್ರತಿ ಲೀ.)         ಡೀಸೆಲ್​ ದರ(ಪ್ರತಿ ಲೀ.)

ಬೆಂಗಳೂರು                  93.43                                               85.60 ದೆಹಲಿ                           90.40                                               80.73 ಚೆನ್ನೈ                           92.43                                                85.75 ಕೋಲ್ಕತ್ತ                     90.62                                                83.61 ಮುಂಬೈ                      96.83                                                87.81 ಅಹ್ಮದಾಬಾದ್​           87.57                                                 86.96 ಲಖನೌ                        88.72                                                81.13 ಹೈದರಾಬಾದ್            93.99                                                88.05 ಜೈಪುರ                         96.77                                                89.20 ಆಗ್ರಾ                            88.48                                               80.82 ಪಾಟ್ನಾ                        92.74                                               85.97

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 11:43 am, Sun, 18 April 21

Follow Us
Lakshmi Hegde
Lakshmi Hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್