Petrol Diesel Price: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ? ನಷ್ಟ ಭರಿಸಲು ಚಿಂತನೆ!
ಸದ್ಯಕ್ಕೆ ಸ್ಥಿರವಾಗಿರುವ ತೈಲ ಬೆಲೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಏರಿಕೆ ಕಾಣಬಹುದು ಎಂದು ತೈಲ ಕಂಪನಿ ಮೂಲಗಳು ಹೇಳುತ್ತಿವೆ.
ದೆಹಲಿ: ಪಂಚ ರಾಜ್ಯಗಳ ಚುನಾವಣೆಯು ಘೋಷಣೆಯಾದಾಗ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿಯೇ ಉಳಿದಿತ್ತು. ಇನ್ನೇನು ಚುನಾವಣೆ ಹತ್ತಿರದಲ್ಲಿದ್ದಾಗ ಕೊಂಚವೇ ಇಳಿಕೆ ಕಂಡಿತ್ತು. ಆದರೂ ಮೊದಲಿಗೆ ಹೋಲಿಸಿದರೆ ಗರಿಷ್ಠ ಮಟ್ಟದಲ್ಲಿಯೇ ಪೆಟ್ರೋಲ್, ಡೀಸೆಲ್ ದರವಿದೆ. ದರ ಪರಿಷ್ಕರಣೆಯ ಸಂದರ್ಭದಲ್ಲಿ ಕಚ್ಚಾ ತೈಲದ ಬೆಲೆ ಏರಿದ್ದರ ಪರಿಣಾಮವಾಗಿ ಭಾರತವು ನಷ್ಟ ಅನುಭವಿಸಿದೆ. ಅದನ್ನು ಸರಿದೂಗಿಸಿಕೊಂಡು ಸಾಗುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ ಅಂದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ದರ ಏರಿಕೆ ನಿರೀಕ್ಷಿಸಬಹುದು ಎಂದು ತೈಲ ಕಂಪನಿ ಮೂಲಗಳು ಹೇಳುತ್ತಿವೆ.
ಇಂದು ಏಪ್ರಿಲ್ 20 ನೇ ತಾರೀಕಿನಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂಬುದರ ಕುತೂಹಲ ಇರುತ್ತದೆ. ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬದಲಾಗುತ್ತಿದೆ. ಹೀಗಿದ್ದಾಗ ಮೆಟ್ರೋ ನಗರಗಳಲ್ಲಿ ಇಂಧನ ದರ ಎಷ್ಟಿದೆ? ಅದರಲ್ಲಿಯೂ ಬೆಂಗಳೂರು ನಗರದಲ್ಲಿ ಪೆಟ್ರೋಲ್ ಡೀಸೆಲ್ ತೈಲಗಳಿಗೆ ಎಷ್ಟು ಹಣ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ ಎಂಬುದರ ವಿವರ ಇಲ್ಲಿದೆ. ಸತತವಾಗಿ ಐದು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿಯೇ ಉಳಿದಿದೆ. ಕಳೆದ ಗುರುವಾರದಂದು ಇಂಧನ ದರ ಕಡಿತದ ನಂತರದ ದಿನಗಳಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ.
ಮಾರ್ಚ್8ನೇ ತಾರೀಕಿನಂದು ಪ್ರತಿ ಬ್ಯಾರೆಲ್ ತೈಲ ದರ 70 ಡಾಲರ್ ಇದ್ದು, ಮಾರ್ಚ್ 23ರ ವೇಳೆಗೆ 61 ಡಾಲರ್ಗೆ ಕುಸಿದಿದೆ. ಅದಾಗಿಯೂ ಕೂಡಾ ಸುಂಕ ಹೆಚ್ಚಳ ಮಾಡಿದ್ದರ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ತಲುಪಿತು. ಆ ಸಮಯದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.4 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.73 ರೂಪಾಯಿ ಆಗಿತ್ತು.
ಸದ್ಯದ ಪರಿಸ್ಥಿತಿಯಲ್ಲಿ ನಷ್ಟ ತುಂಬಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ. ಚುನಾವಣಾ ಅವಧಿಯಲ್ಲಿ ಲಾಭದ ಪ್ರಮಾಣ ಕಡಿಮೆ ಮಾಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸರಿಸೂಗಿಸಿಕೊಳ್ಳಲು ಚಿಂತನೆ ನಡೆಸುತ್ತಿದ್ದಂತಿದೆ. ಇನ್ನೇನು ಪಂಚ ರಾಜ್ಯಗಳ ಚುನಾವಣೆ ಕೊನೆಯ ಹಂತದಲ್ಲಿದೆ. ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿ ಏರಿಕೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.43 ರೂಪಾಯಿ ಇದೆ. ಹಾಗೆಯೇ ಮೈಸೂರು ನಗರದಲ್ಲಿ ಪ್ರತಿ ಲಿಟರ್ ಪೆಟ್ರೋಲ್ ಬೆಲೆ 93.03 ರೂಪಾಯಿ ಇದೆ. ಮಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 92.66 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.99 ರೂಪಾಯಿ ಇದೆ.
ಪುಣೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವನ್ನು ಗಮನಿಸಿದಾಗ 96.47 ರೂಪಾಯಿ ಇದೆ. ಅಂತೆಯೇ ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.43 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ ಗ್ರಾಹಕರು 96.83 ರೂಪಾಯಿ ಕೊಟ್ಟು ಕೊಳ್ಳುತ್ತಿದ್ದಾರೆ. ಅದೇ ರೀತಿ ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.79 ರೂಪಾಯಿ ಇದೆ.
ವಿವಿಧ ನಗರದ ಪೆಟ್ರೋಲ್ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:28 am, Tue, 20 April 21