AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಮಾರ್ಚ್​ 30ರಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ.. ಪೆಟ್ರೋಲ್​ನಲ್ಲಿ 22 ಪೈಸೆ ಇಳಿಕೆ!

Petrol Diesel Rate In Bangalore Today: ನಾಲ್ಕು ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ದರ ಸ್ಥಿರತೆಯನ್ನು ಕಂಡಿತ್ತು. ಅದಾದ ನಂತರ ಇಂದು ಮಾರ್ಚ್​ 30ರಂದು ಇಂಧನ ದರ ಇಳಿಕೆ ಕಂಡಿದೆ.

Petrol Diesel Price Today: ಮಾರ್ಚ್​ 30ರಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ.. ಪೆಟ್ರೋಲ್​ನಲ್ಲಿ 22 ಪೈಸೆ ಇಳಿಕೆ!
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on:Mar 30, 2021 | 4:18 PM

Share

ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತ ಕಾಣುತ್ತಿರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ದರವನ್ನು ಕಡಿತಗೊಳಿಸಿದೆ. ಇಂದು ಮಾರ್ಚ್​ 30ರಂದು ಪ್ರತಿ ಲೀಟರ್​ ಪೆಟ್ರೋಲ್​ 22 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 23 ಪೈಸೆ ಕಡಿಮೆಯಾಗಿದೆ. ಆ ನಂತರ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80.87 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಬೆಂಗಳೂರಿನಲ್ಲಿ ದರ ಇಳಿಕೆಯ ನಂತರ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಆಗಿದೆ.

ನಾಲ್ಕು ದಿನದ ನಂತರ ಬದಲಾದ ಪೆಟ್ರೋಲ್​, ಡೀಸೆಲ್​ ದರ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಸತತವಾಗಿ ಎರಡು ದಿನಗಳ ಕಾಲ ಮಾರ್ಚ್​ 24 ಹಾಗೂ 25ನೇ ತಾರೀಕಿನಂದು ಪೆಟ್ರೋಲ್​, ಡೀಸೆಲ್​ ದರ ಇಳಿಕೆಯಾಗಿತ್ತು. ತದನಂತರದಲ್ಲಿ ನಾಲ್ಕು ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ದರ ಸ್ಥಿರತೆ ಕಾಪಾಡಿಕೊಂಡಿತ್ತು. ಆ ನಂತರ ಇಂದು ಮಾರ್ಚ್​ 30ನೇ ತಾರೀಕು ಪೆಟ್ರೋಲ್​, ಡೀಸೆಲ್​ ದರ ಇಳಿಕೆ ಕಂಡಿದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ದರ ಇಳಿಕೆ ನಂತರದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 90.56 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80.87 ರೂಪಾಯಿ ಆಗಿದೆ. ಹಾಗೆಯೇ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಆಗಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಆಗಿದೆ.

ಇನ್ನು, ಕೊಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 83.75 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಆಗಿದದು, ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಆಗಿದೆ.

ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಆಗಿದೆ. ಭೂಪಾಲ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 98.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ 89.13 ರೂಪಾಯಿಗೆ ಇಳಿದಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.89 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 86. 12 ರೂಪಾಯಿ ಆಗಿದೆ.

ದರ ಇಳಿಕೆಯ ನಂತರ ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.85 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.27 ರೂಪಾಯಿ ಆಗಿದೆ. ಹಾಗೂ ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಆಗಿದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/diesel-price-today.html

Published On - 9:31 am, Tue, 30 March 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!