Petrol Diesel Price Today: ಮಾರ್ಚ್​ 30ರಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ.. ಪೆಟ್ರೋಲ್​ನಲ್ಲಿ 22 ಪೈಸೆ ಇಳಿಕೆ!

|

Updated on: Mar 30, 2021 | 4:18 PM

Petrol Diesel Rate In Bangalore Today: ನಾಲ್ಕು ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ದರ ಸ್ಥಿರತೆಯನ್ನು ಕಂಡಿತ್ತು. ಅದಾದ ನಂತರ ಇಂದು ಮಾರ್ಚ್​ 30ರಂದು ಇಂಧನ ದರ ಇಳಿಕೆ ಕಂಡಿದೆ.

Petrol Diesel Price Today: ಮಾರ್ಚ್​ 30ರಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ.. ಪೆಟ್ರೋಲ್​ನಲ್ಲಿ 22 ಪೈಸೆ ಇಳಿಕೆ!
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತ ಕಾಣುತ್ತಿರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ದರವನ್ನು ಕಡಿತಗೊಳಿಸಿದೆ. ಇಂದು ಮಾರ್ಚ್​ 30ರಂದು ಪ್ರತಿ ಲೀಟರ್​ ಪೆಟ್ರೋಲ್​ 22 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 23 ಪೈಸೆ ಕಡಿಮೆಯಾಗಿದೆ. ಆ ನಂತರ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80.87 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಬೆಂಗಳೂರಿನಲ್ಲಿ ದರ ಇಳಿಕೆಯ ನಂತರ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಆಗಿದೆ.

ನಾಲ್ಕು ದಿನದ ನಂತರ ಬದಲಾದ ಪೆಟ್ರೋಲ್​, ಡೀಸೆಲ್​ ದರ
ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಸತತವಾಗಿ ಎರಡು ದಿನಗಳ ಕಾಲ ಮಾರ್ಚ್​ 24 ಹಾಗೂ 25ನೇ ತಾರೀಕಿನಂದು ಪೆಟ್ರೋಲ್​, ಡೀಸೆಲ್​ ದರ ಇಳಿಕೆಯಾಗಿತ್ತು. ತದನಂತರದಲ್ಲಿ ನಾಲ್ಕು ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ದರ ಸ್ಥಿರತೆ ಕಾಪಾಡಿಕೊಂಡಿತ್ತು. ಆ ನಂತರ ಇಂದು ಮಾರ್ಚ್​ 30ನೇ ತಾರೀಕು ಪೆಟ್ರೋಲ್​, ಡೀಸೆಲ್​ ದರ ಇಳಿಕೆ ಕಂಡಿದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ
ದರ ಇಳಿಕೆ ನಂತರದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 90.56 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80.87 ರೂಪಾಯಿ ಆಗಿದೆ. ಹಾಗೆಯೇ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಆಗಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಆಗಿದೆ.

ಇನ್ನು, ಕೊಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 83.75 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಆಗಿದದು, ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಆಗಿದೆ.

ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಆಗಿದೆ. ಭೂಪಾಲ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 98.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ 89.13 ರೂಪಾಯಿಗೆ ಇಳಿದಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.89 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 86. 12 ರೂಪಾಯಿ ಆಗಿದೆ.

ದರ ಇಳಿಕೆಯ ನಂತರ ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.85 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.27 ರೂಪಾಯಿ ಆಗಿದೆ. ಹಾಗೂ ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಆಗಿದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/diesel-price-today.html

Published On - 9:31 am, Tue, 30 March 21