Petrol Diesel Price Today: ಇಳಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್, ಡೀಸೆಲ್ ದರ ಸತತ ನಾಲ್ಕು ದಿನಗಳಾದರೂ ಬದಲಾವಣೆ ಕಂಡಿಲ್ಲ!
Petrol Diesel Rate In Bangalore Today: ಎರಡು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ದರ ಇಳಿಕೆಯ ಹಾದಿ ಹಿಡಿದಿತ್ತು. ಮತ್ತೆ ಸತತವಾಗಿ ನಾಲ್ಕು ದಿನಗಳಾದರೂ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ಬೆಂಗಳೂರು: ಮಾರ್ಚ್ 29 ಸೋಮವಾರ ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ನಾಲ್ಕು ದಿನಗಳಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.82 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 85.99 ರೂಪಾಯಿಗೆ ಮಾರಾಟವಾಗುತ್ತಿದೆ.
ಫೆಬ್ರವರಿ ತಿಂಗಳ ಕೊನೆಯ ಶನಿವಾರ 27ನೇ ತಾರೀಕಿನಂದು ಪೆಟ್ರೋಲ್, ಡೀಸೆಲ್ ದರ ಏರಿಕೆಯ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ಎದುರಿಗಿರುವುದರಿಂದ ಇಂಧನ ದರ ಸ್ಥಿರವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಮಾರ್ಚ್ ತಿಂಗಳ ಕೊನೆಯ ವಾರ ಎರಡು ದಿನಗಳ ಕಾಲ ಪೆಟ್ರೋಲ್, ಡೀಸೆಲ್ ದರ ಇಳಿಕೆಯ ಮುಖ ಮಾಡಿತ್ತು. ಸತತ ಎರಡು ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 39 ಪೈಸೆ ಇಳಿಕೆಯಾಯಿತು. ತದ ನಂತರ ನಾಲ್ಕು ದಿನಗಳಾದರೂ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಕಂಡು ಬಂದಿಲ್ಲ.
ಇಂಧನ ದರ ಇಳಿಕೆಯತ್ತ ಮುಖ ಮಾಡಿದ್ದನ್ನು ಕಂಡ ಗ್ರಾಹಕರು ಖುಷಿ ಪಟ್ಟಿದ್ದರು. ಗರಿಷ್ಠ ಮಟ್ಟಕ್ಕೆ ತಲುಪಿದ್ದ ಪೆಟ್ರೋಲ್, ಡೀಸೆಲ್ಅನ್ನು ಕೊಳ್ಳಲು ಬಡವರು ಹಾಗೂ ಮಧ್ಯವರ್ಗದ ಜನರು ಕಷ್ಟ ಪಡುವ ಪರಿಸ್ಥಿತಿ ಎದುರಾಗಿತ್ತು. ಇಂಧನ ದರ ಏರಿಕೆಯು ಗ್ರಾಹಕರ ಕೆಂಗಣ್ಣಿಗೂ ಕಾರಣವಾಗಿತ್ತು. ದರ ಇಳಿಕೆ ಕಂಡು ಬಂದಿದ್ದನ್ನು ಕಂಡ ಜನರು ಕೊಂಚ ನಿರಾಳರಾಗಿದ್ದರೂ ಕೂಡಾ ಇಳಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಇದೀಗ ನಾಲ್ಕು ದಿನಗಳಾದರೂ ಸ್ಥಿರವಾಗಿಯೇ ಉಳಿದಿದೆ ಎಂಬ ಮಾತುಗಳು ಜನರಿಂದ ಕೇಳಿ ಬರುತ್ತಿದೆ. ಕೊಂಚ ಬೇಸರವೂ ವ್ಯಕ್ತವಾಗುತ್ತಿದೆ.
ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಗಮನಿಸಿದಾಗ ಪ್ರತಿ ಲೀಟರ್ ಪೆಟ್ರೋಲ್ ದರ ದೆಹಲಿಯಲ್ಲಿ 90.78 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.10 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 97.19 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 88.20 ರೂಪಾಯಿಗೆ ಮಾರಾಟವಾಗುತ್ತಿದೆ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 90.98 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.98 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 92.77 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 86.10 ರೂಪಾಯಿಗೆ ಮಾರಾಟವಾಗುತ್ತಿದೆ. ಇನ್ನು, ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 89.08 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 81.56 ರೂಪಾಯಿಗೆ ಮಾರಾಟವಾಗುತ್ತಿದೆ.
ವಿವಿಧ ನಗರದ ಪೆಟ್ರೋಲ್ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:



