AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಏಪ್ರಿಲ್​ 28 ರಂದು ಬದಲಾಗದ ಪೆಟ್ರೋಲ್​ ಡೀಸೆಲ್​ ದರ; ಸತತ 13 ದಿನಗಳ ಕಾಲ ತೈಲ ಬೆಲೆ ಸ್ಥಿರ

Petrol Diesel Rate Today in Bangalore: ಪ್ರಸ್ತುತ ಕಳೆದ 13 ದಿನಗಳಿಂದ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​ ಪೆಟ್ರೋಲ್​ ದರ 90 ರೂ. 40 ಪೈಸೆ ಇದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ 80 ರೂ.73 ಪೈಸೆ ಇದೆ.

Petrol Diesel Price: ಏಪ್ರಿಲ್​ 28 ರಂದು ಬದಲಾಗದ ಪೆಟ್ರೋಲ್​ ಡೀಸೆಲ್​ ದರ; ಸತತ 13 ದಿನಗಳ ಕಾಲ ತೈಲ ಬೆಲೆ ಸ್ಥಿರ
ಪ್ರಾತಿನಿಧಿಕ ಚಿತ್ರ
shruti hegde
|

Updated on: Apr 28, 2021 | 9:07 AM

Share

ದೆಹಲಿ: ಪ್ರಸ್ತುತ ಕಳೆದ 13 ದಿನಗಳಿಂದ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​ ಪೆಟ್ರೋಲ್​ ದರ 90 ರೂ. 40 ಪೈಸೆ ಇದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ 80 ರೂ.73 ಪೈಸೆ ಇದೆ. ಕಳೆದ ಮಾರ್ಚ್​ ತಿಂಗಳಿನಲ್ಲಿ ಪೆಟ್ರೋಲ್​, ಡೀಸೆಲ್​ ದರವನ್ನು ಮೂರು ಬಾರಿ ಕಡಿತಗೊಳಿಸಲಾಗಿತ್ತು. ಈ ಕಡಿತದ ನಂತರದಲ್ಲಿ ಪೆಟ್ರೊಲ್​ ಕೇಲವ 61 ಪೈಸೆ ಹಾಗೂ ಡೀಸೆಲ್​ ಕೇವಲ 60 ಪೈಸೆ ಕಡಿಮೆಯಾಯಿತು.

ಅದಕ್ಕೂ ಮೊದಲು ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್​ ಬೆಲೆಯನ್ನು 16 ಬಾರಿ ಹೆಚ್ಚಿಸಲಾಗಿತ್ತು. ಅದರಿಂದ ಪೆಟ್ರೊಲ್​ ದರ 4 ರೂ. 74 ಪೈಸೆಯಷ್ಟು ಏರಿಕೆಯಾಯಿತು. ಡೀಸೆಲ್​ ದರವನ್ನು ಪರಿಶೀಲಿಸಿದಾಗ, 16 ಬಾರಿ ಹೆಚ್ಚಿಸಿದ ನಂತರ ಒಟ್ಟು 4 ರೂ. 52 ಪೈಸೆಯಷ್ಟು ದರ ಏರಿಕೆಯಾಯಿತು. ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​, ಡೀಸೆ ದರವನ್ನು ಪರಿಷ್ಕರಿಸಲಾಗುತ್ತದೆ. ಸರ್ಕಾರಿ ತೈಲ ಕಂಪನಿಗಳು ಇಂಡಿಯನ್​ ಆಯಿಲ್​(ಐಒಸಿ), ಭಾರತ್​ ಪೆಟ್ರೊಲಿಯಂ ಕಾರ್ಪೊರೇಷನ್​ ಲಿಮಿಟೆಡ್​(ಬಿಪಿಸಿಎಲ್​) ಮತ್ತು ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೊರೇಷನ್​ ಲಿಮಿಟೆಡ್​ (ಹೆಚ್​ಪಿಸಿಎಲ್​) ಮೂಲಕ ಪ್ರತಿನಿತ್ಯ ಹೊಸ ದರಗಳು ಬಿಡುಗಡೆಗೊಳ್ಳುತ್ತದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್​ ಡೀಸೆಲ್​ದರವನ್ನು ಗಮನಿಸಿದಾಗ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96. 83 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87. 81 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.43 ರೂಪಾಯಿ ಇದೆ. ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.62 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 83.61 ರೂಪಾಯಿ ಇದೆ. ಭೂಪಾಲ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 98.41 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.98 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.79 ರೂ. ಇದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.19 ರೂಪಾಯಿ ಇದೆ.

ಲಕ್ನೊದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.72 ರೂಪಾಯಿ ಇದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 81.13 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.43 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.60 ರೂಪಾಯಿ ಇದೆ. ಚಂಡೀಗಡದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 86.99 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 80.43 ರೂಪಾಯಿ ಇದೆ. ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.74 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.97 ರೂಪಾಯಿ ಇದೆ.

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel price today in delhi bangalore mumbai on 2021 April 28 check here to know fuel rate in your city)

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ