ದೆಹಲಿ: ಪ್ರಸ್ತುತ ಕಳೆದ 13 ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 90 ರೂ. 40 ಪೈಸೆ ಇದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರ 80 ರೂ.73 ಪೈಸೆ ಇದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಮೂರು ಬಾರಿ ಕಡಿತಗೊಳಿಸಲಾಗಿತ್ತು. ಈ ಕಡಿತದ ನಂತರದಲ್ಲಿ ಪೆಟ್ರೊಲ್ ಕೇಲವ 61 ಪೈಸೆ ಹಾಗೂ ಡೀಸೆಲ್ ಕೇವಲ 60 ಪೈಸೆ ಕಡಿಮೆಯಾಯಿತು.
ಅದಕ್ಕೂ ಮೊದಲು ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ಬೆಲೆಯನ್ನು 16 ಬಾರಿ ಹೆಚ್ಚಿಸಲಾಗಿತ್ತು. ಅದರಿಂದ ಪೆಟ್ರೊಲ್ ದರ 4 ರೂ. 74 ಪೈಸೆಯಷ್ಟು ಏರಿಕೆಯಾಯಿತು. ಡೀಸೆಲ್ ದರವನ್ನು ಪರಿಶೀಲಿಸಿದಾಗ, 16 ಬಾರಿ ಹೆಚ್ಚಿಸಿದ ನಂತರ ಒಟ್ಟು 4 ರೂ. 52 ಪೈಸೆಯಷ್ಟು ದರ ಏರಿಕೆಯಾಯಿತು. ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆ ದರವನ್ನು ಪರಿಷ್ಕರಿಸಲಾಗುತ್ತದೆ. ಸರ್ಕಾರಿ ತೈಲ ಕಂಪನಿಗಳು ಇಂಡಿಯನ್ ಆಯಿಲ್(ಐಒಸಿ), ಭಾರತ್ ಪೆಟ್ರೊಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಹೆಚ್ಪಿಸಿಎಲ್) ಮೂಲಕ ಪ್ರತಿನಿತ್ಯ ಹೊಸ ದರಗಳು ಬಿಡುಗಡೆಗೊಳ್ಳುತ್ತದೆ.
ವಿವಿಧ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ದರವನ್ನು ಗಮನಿಸಿದಾಗ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96. 83 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87. 81 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.43 ರೂಪಾಯಿ ಇದೆ. ಪ್ರತಿ ಲೀಟರ್ ಡೀಸೆಲ್ ದರ 85.75 ರೂಪಾಯಿ ಇದೆ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.62 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.61 ರೂಪಾಯಿ ಇದೆ. ಭೂಪಾಲ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 98.41 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.98 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.79 ರೂ. ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.19 ರೂಪಾಯಿ ಇದೆ.
ಲಕ್ನೊದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.72 ರೂಪಾಯಿ ಇದೆ. ಹಾಗೆಯೇ ಪ್ರತಿ ಲೀಟರ್ ಡೀಸೆಲ್ ದರ 81.13 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.43 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.60 ರೂಪಾಯಿ ಇದೆ. ಚಂಡೀಗಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 86.99 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.43 ರೂಪಾಯಿ ಇದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.74 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.97 ರೂಪಾಯಿ ಇದೆ.
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
(Petrol diesel price today in delhi bangalore mumbai on 2021 April 28 check here to know fuel rate in your city)