Petrol Diesel Price: ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.43 ರೂಪಾಯಿ; ವಿವಿಧ ನಗರಗಳಲ್ಲಿ ತೈಲ ಬೆಲೆ ಹೀಗಿದೆ
Petrol Diesel Rate Today in Bangalore: ಚುನಾವಣೆಯ ನಂತರ ಪ್ರತಿ ಲೀಟರ್ ಪೆಟ್ರೋಲ್ನಲ್ಲಿ ಸುಮಾರು 2 ರೂಪಾಯಿ ಏರಿಕೆ ಮತ್ತು ಪ್ರತಿ ಲೀಟರ್ ಡೀಸೆಲ್ನಲ್ಲಿ 3 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಷಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿ: ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ ಎಂಬ ಮಾತುಗಳು ಕೇಳಿಬರುತ್ತವೆ. ಮಾರ್ಚ್ 27ರಿಂದ ಕೆಲವು ರಾಜ್ಯಗಳಲ್ಲಿ ಚುನಾವಣೆ ಹಿನ್ನೆಲೆ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಇದರ ಫಲಿತಾಂಶ ಮೇ 2ರಂದು ಹೊರಬೀಳಲಿದೆ. ಚುನಾವಣೆಯ ನಂತರ ಪ್ರತಿ ಲೀಟರ್ ಪೆಟ್ರೋಲ್ನಲ್ಲಿ ಸುಮಾರು 2 ರೂಪಾಯಿ ಏರಿಕೆ ಮತ್ತು ಪ್ರತಿ ಲೀಟರ್ ಡೀಸೆಲ್ನಲ್ಲಿ 3 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಷಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ ತಿಂಗಳ ಪ್ರಾರಂಭದ 15 ದಿನಗಳ ನಂತರ ಪೆಟ್ರೋಲ್, ಡೀಸೆಲ್ ದರ ಕೊಂಚವೇ ಇಳಿಕೆ ಮಾಡಲಾಯಿತು. ತದನಂತರ ಸತತ 12 ನೇ ದಿನವಾದರೂ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗಿಲ್ಲ.
ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 14 ಪೈಸೆ ಕಡಿಮೆ ಮಾಡಿದ ನಂತರದಲ್ಲಿ ದರ ವ್ಯತ್ಯಾಸದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂ. 40 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80 ರೂ. 73 ಪೈಸೆ ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96 ರೂಪಾಯಿ 83 ಪೈಸೆ ಇದೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರವು 87 ರೂಪಾಯಿ 81 ಪೈಸೆ ಇದೆ. ಚೆನ್ನೈನಲ್ಲಿ ಪೆಟ್ರೋಲ್ ದರವನ್ನು ಗಮನಿಸಿದಾಗ ಪ್ರತಿ ಲೀಟರ್ ಪೆಟ್ರೋಲ್ ದರ 92 ರೂಪಾಯಿ 43 ಪೈಸೆ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85 ರೂ. 75 ಪೈಸೆ ಇದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 93 ರೂ. 43 ಪೈಸೆಗೆ ಮಾರಾಟವಾಗುತ್ತಿದೆ. ಮತ್ತು ಪ್ರತಿ ಲೀಟರ್ ಡೀಸೆಲ್ಅನ್ನು 85 ರೂ. 60 ಪೈಸೆ ಕೊಟ್ಟು ಕೊಳ್ಳುತ್ತಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿನ ಬದಲಾವಣೆ ಮತ್ತು ವಿದೇಶಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ನಂತರದಲ್ಲಿ ಸರ್ಕಾರಿ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡಿದ ಬಳಿಕೆ ಪೆಟ್ರೋಲ್ ಮತ್ತು ಡೀಸೆಲ್ ದರ ನಿರ್ಧಾರವಾಗುತ್ತದೆ. ಪ್ರತಿನಿತ್ಯ ಬೆಳಿಗ್ಗೆ ಪೆಟ್ರೋಲ್, ಡೀಸೆಲ್ದರವನ್ನು ಪರಿಷ್ಕರಿಸಲಾಗುತ್ತದೆ.
ಕರ್ನಾಟಕ ರಾಗ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಡೀಸೆಲ್ ದರ ಗಮನಿಸುವುದಾದರೆ ಬೆಳಗಾವಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93. 89 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 86.05 ರೂಪಾಯಿ ಇದೆ. ಬಳ್ಳಾರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 95.02 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87.08 ರೂಪಾಯಿ ಇದೆ. ಚಿಕ್ಕಮಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.34 ರೂಪಾಯಿ ಇದೆ. ಮತ್ತು ಪ್ರತಿ ಲೀಟರ್ ಡೀಸೆಲ್ ದರ 86.40 ರೂಪಾಯಿ ಇದೆ.
ವಿವಿಧ ನಗರದ ಪೆಟ್ರೋಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html
(Petrol Diesel price Today on 2021 april 27 in delhi bangalore mumbai check here to know fuel rate in your city)
Published On - 8:38 am, Tue, 27 April 21