Petrol Diesel Rate Today: ಮೇ 10ರಂದು ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ; ಎಷ್ಟು ಹೆಚ್ಚಳ? ಇಲ್ಲಿದೆ ದರ ವಿವರ

| Updated By: Digi Tech Desk

Updated on: May 10, 2021 | 9:33 AM

Petrol Diesel Price Today: ಸತತವಾಗಿ ಎರಡು ದಿನಗಳ ಕಾಲ ಸ್ಥಿರತೆ ಹೊಂದಿದ್ದ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಂದು ಸೋಮವಾರ ಮತ್ತೆ ಏರಿಕೆಯಾಗಿದೆ. ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆಯಷ್ಟು ಏರಿಕೆಯಾಗಿದ್ದರೆ, ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ.

Petrol Diesel Rate Today: ಮೇ 10ರಂದು ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ; ಎಷ್ಟು ಹೆಚ್ಚಳ? ಇಲ್ಲಿದೆ ದರ ವಿವರ
ಪಿಟಿಐ ಚಿತ್ರ
Follow us on

ದೆಹಲಿ: ಸತತವಾಗಿ ಎರಡು ದಿನಗಳ ಕಾಲ ಸ್ಥಿರತೆ ಹೊಂದಿದ್ದ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಂದು ಸೋಮವಾರ ಮತ್ತೆ ಏರಿಕೆಯಾಗಿದೆ. ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆಯಷ್ಟು ಏರಿಕೆಯಾಗಿದ್ದರೆ, ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ. ತದನಂತರ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.53 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು 98.86 ರೂಪಾಯಿಗೆ ತಲುಪಿದೆ. ಇನ್ನು, ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.38 ರೂಪಾಯಿ ಆಗಿದ್ದು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.66 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.57 ರೂಪಾಯಿ ಆಗಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 86.99 ರೂಪಾಯಿ ಆಗಿದೆ.

ಇಂದು ತೈಲ ದರ ಏರಿಕೆಯ ಬಳಿಕ ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 95.13 ರೂಪಾಯಿ ಆಗಿದೆ. ಜೈಪುರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 97.92 ರೂಪಾಯಿ ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.77 ರೂಪಾಯಿ, ಹಾಗೆಯೇ ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 89.56 ರೂಪಾಯಿ ಆಗಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 89.64 ರೂಪಾಯಿ ಆಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಡೀಸೆಲ್​ ದರದಲ್ಲಿ 35 ಪೈಸೆ ಹೆಚ್ಚಿಸಿದ್ದು, ದೆಹಲಿಯಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 82.06 ರೂಪಾಯಿ ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 89.17 ರೂಪಾಯಿಗೆ ಏರಿಕೆ ಮಾಡಲಾಗಿದೆ. ಭಾರತದಲ್ಲಿ ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಗೆ ತೈಲ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಅಂತರಾಷ್ಟ್ರೀಯ ಕಚ್ಚಾ ಬೆಲೆಗಳು, ಮತ್ತು ವಿದೇಶಿ ಮಿನಿಮಯ ದರದ ಆಧಾರದ ಮೇಲೆ ಇಂಧನ ದರದ ಮೌಲ್ಯ ನಿರ್ಧಾರವಾಗುತ್ತದೆ. ಜೊತೆಗೆ ವ್ಯಾಟ್​, ಸರಕು ಶುಲ್ಕಗಳಂತಹ ಸ್ಥಳೀಯ ತೆರಿಗೆಗಳನ್ನು ಆಧರಿಸಿ ಬೆಲೆ ನಿರ್ಧಾರ ಮಾಡಲಾಗುತ್ತದೆ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 84.90 ರೂಪಾಯಿ ಆಗಿದೆ. ಹಾಗೆಯೇ ಚೆನ್ನೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 86.96 ರೂಪಾಯಿಗೆ ಏರಿಕೆ ಆಗಿದೆ. ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 89.47 ರೂಪಾಯಿ, ಜೈಪುರದಲ್ಲಿ 90.61 ರೂಪಾಯಿ, ಪಾಟ್ನಾದಲ್ಲಿ 87.27 ರೂಪಾಯಿ, ಲಕ್ನೋದಲ್ಲಿ 82.43 ರೂಪಾಯಿ, ನೋಯ್ಡಾದಲ್ಲಿ 82.51 ರೂಪಾಯಿಗೆ ಪ್ರತಿ ಲೀಟರ್​ ಡೀಸೆಲ್​ ದರವನ್ನು ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: Petrol Diesel Rate: ಭಾನುವಾರ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ದರ ವಿವರ ಹೀಗಿದೆ!

Published On - 9:21 am, Mon, 10 May 21