Petrol Diesel Price: ಏಪ್ರಿಲ್ ತಿಂಗಳಿನಿಂದ ಸತತ 18 ದಿನಗಳ ಕಾಲ ಬದಲಾಗದ ಪೆಟ್ರೋಲ್, ಡೀಸೆಲ್ ದರ
Petrol Diesel Rate in Bangalore: ಸತತ 18ನೇ ದಿನಗಳವರೆಗೆ ಪೆಟ್ರೋಲ್, ಡೀಸೆಲ್ ದರ ಬದಲಾಗದೆ ಸ್ಥಿರವಾಗಿ ಉಳಿದಿದೆ. ಮಾರ್ಚ್ ತಿಂಗಳಿನಲ್ಲಿ ಮೂರು ದಿನ ಮತ್ತು ಏಪ್ರಿಲ್ ತಿಂಗಳಿನಲ್ಲಿ ಒಂದು ದಿನ ಪೆಟ್ರೋಲ್, ಡೀಸೆಲ್ ದರವನ್ನು ಕಡಿತಗೊಳಿಸಲಾಗಿತ್ತು.
ದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದು ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರವನ್ನು ಬಿಡುಗಡೆ ಮಾಡಿದೆ. ಇಂದು ಸೋಮವಾರ ತೈಲ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಸತತ 18ನೇ ದಿನಗಳವರೆಗೆ ಪೆಟ್ರೋಲ್, ಡೀಸೆಲ್ ದರ ಬದಲಾಗದೆ ಸ್ಥಿರವಾಗಿ ಉಳಿದಿದೆ. ಮಾರ್ಚ್ ತಿಂಗಳಿನಲ್ಲಿ ಮೂರು ದಿನ ಮತ್ತು ಏಪ್ರಿಲ್ ತಿಂಗಳಿನಲ್ಲಿ ಒಂದು ದಿನ ಪೆಟ್ರೋಲ್, ಡೀಸೆಲ್ ದರವನ್ನು ಕಡಿತಗೊಳಿಸಲಾಗಿತ್ತು. ಏಪ್ರಿಲ್ 15ನೇ ತಾರೀಕಿನಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 14 ಪೈಸೆ ಇಳಿಕೆ ಮಾಡಲಾಯಿತು.
ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸತತವಾಗಿ 16 ದಿನಗಳವರೆಗೆ ಹೆಚ್ಚಿಸಲಾಯಿತು. ಸತತ 16 ದಿನಗಳವರೆಗೆ ಏರಿದ ಪೆಟ್ರೋಲ್ ದರದಲ್ಲಿ 4.74 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 4.52 ರೂಪಾಯಿ ಏರಿಕೆ ಮಾಡಲಾಯಿತು. ದರ ಏರಿಕೆಯ ನಂತರದಲ್ಲಿ ರಾಜಸ್ಥಾನದ ಶ್ರೀ ಗಂಗನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 100.89 ರೂಪಾಯಿ, ಮಧ್ಯಪ್ರದೇಶದ ಅನುಪ್ಪೂರಿನಲ್ಲಿ ಪೆಟ್ರೋಲ್ ದರ 100.79 ರೂಪಾಯಿ ಆಗಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.40 ರೂಪಾಯಿ ಇದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರ 80.73 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.83 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87.81 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.62 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.61 ರೂಪಾಯಿ ಇದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.43 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.75 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.79 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.19 ರೂಪಾಯಿ ಇದೆ.
ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.43 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.60 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.99 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.05 ರೂಪಾಯಿ ಆಗಿದೆ. ಪಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.74 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.97 ರೂಪಾಯಿ ಇದೆ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.77 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 89.20 ರೂಪಾಯಿ ಆಗಿದೆ. ಲಕ್ನೊದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.72 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.13 ರೂಪಾಯಿ ಆಗಿದೆ.
ಇದನ್ನೂ ಓದಿ: Petrol Diesel Price: ಗ್ರಾಹಕರು ಕೊಂಚ ನಿರಾಳ.. ಪೆಟ್ರೋಲ್ ದರದಲ್ಲಿ 18 ಪೈಸೆ ಇಳಿಕೆ!
(Petrol Diesel Price today on 2021 may 3 in bangalore mumbai delhi chennai )
Published On - 9:18 am, Mon, 3 May 21