Petrol Diesel Rate Today: ದೆಹಲಿಯಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ; ನಿಮ್ಮೂರಿನಲ್ಲಿ ತೈಲ ದರ ಎಷ್ಟಿದೆ?

Petrol Diesel Price Today: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯನ್ನು ಲೀಟರ್​ಗೆ 27 ಪೈಸೆ ಮತ್ತು30 ಪೈಸೆ ಹೆಚ್ಚಿಸಿದ ನಂತರದಲ್ಲಿ ಮಂಗಳವಾರದಂದು (ಮೇ 11) ದೇಶಾದ್ಯಂತ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯಾಗಿದೆ.

Petrol Diesel Rate Today: ದೆಹಲಿಯಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ; ನಿಮ್ಮೂರಿನಲ್ಲಿ ತೈಲ ದರ ಎಷ್ಟಿದೆ?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us
shruti hegde
|

Updated on: May 11, 2021 | 9:18 AM

ದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯನ್ನು ಲೀಟರ್​ಗೆ 27 ಪೈಸೆ ಮತ್ತು30 ಪೈಸೆ ಹೆಚ್ಚಿಸಿದ ನಂತರದಲ್ಲಿ ಮಂಗಳವಾರದಂದು (ಮೇ 11) ದೇಶಾದ್ಯಂತ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯಾಗಿದೆ. ಕ್ರಮವಾಗಿ ಮಹಾರಾಷ್ಟ್ರವೂ ಸೇರಿದಂತೆ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 100 ರೂಪಾಯಿ ಗಡಿ ದಾಟಿದೆ. ಇಂಧನ ದರ ಏರಿಕೆಯ ನಂತರದಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.80 ರೂಪಾಯಿ ಆಗಿದೆ. ನಿನ್ನೆ ಸೋಮವಾರ 91.53 ರೂಪಾಯಿ ಇತ್ತು. 27 ಪೈಸೆಯಷ್ಟು ದರ ಏರಿಕೆಯ ನಂತರ ಪ್ರತಿ ಲೀಟರ್​ ಪೆಟ್ರೋಲ್​ ದರ ಹೆಚ್ಚಳವಾಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ 82.36 ರೂಪಾಯಿಗೆ ಏರಿಕೆಯಾಗಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 18 ದಿನಗಳ ಕಾಲ ಸ್ಥಿರವಾಗಿದ್ದ ನಂತರದಲ್ಲಿ ಮೇ 4ರಂದು ಪೆಟ್ರೋಲ್​, ಡೀಸೆಲ್​ ದರವನ್ನು ಪರಿಷ್ಕರಿಸಲಾಯಿತು. ಮತ್ತು ದರ ಹೆಚ್ಚಳ ಮಾಡಲಾಯಿತು. ತೈಲ ದರ ಏರಿಕೆಯಲ್ಲಿ ಇಂದು ಆರನೇ ದಿನ ದರ ಏರಿಕೆಯಾಗಿದೆ. ಇಂದಿನ ದರ ಏರಿಕೆಯ ನಂತರದಲ್ಲಿ ದೆಹಲಿಯಲ್ಲಿ ಪೆಟ್ರೋಲ್​, ಡಿಸೆಲ್​ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ದೆಹಲಿಯಲ್ಲಿ ಕಳೆದ ಒಂದು ವಾರದಲ್ಲಿ ಪೆಟ್ರೊಲ್​ ದರ 1.35 ರೂಪಾಯಿ ಹಾಗೂ ಡೀಸೆಲ್​ ದರ 1.63 ರೂಪಾಯಿಗಳಷ್ಟು ಏರಿಕೆಯಾಗಿದೆ.

ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.20 ರೂಪಾಯಿಗೆ ಏರಿದ್ದರೆ, ಪ್ರತಿ ಲೀಟರ್​ ಡೀಸೆಲ್​ ದರ 89.48 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.20 ರೂಪಾಯಿ ಆಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 85.20 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.62 ರೂಪಾಯಿಗೆ ಏರಿಕೆಯಾಗಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 87.25 ರೂಪಾಯಿ ಆಗಿದೆ.

ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.85 ರೂಪಾಯಿ ಆಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 87.31 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಆಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 89.79 ರೂಪಾಯಿ ಆಗಿದೆ. ಶ್ರೀಗಂಗನಗರದಲ್ಲಿ (ರಾಜಸ್ಥಾನ) ಪ್ರತಿ ಲೀಟರ್​ ಪೆಟ್ರೋಲ್​ ದರ 102.70 ರೈಪಾಯಿ ಆಗಿದ್ದರೆ, ಪ್ರತಿ ಲೀಟರ್​ ಡೀಸೆಲ್​ ದರ 95.06 ರೂಪಾಯಿ ಆಗಿದೆ. ಹಾಗೆಯೇ ಪಾಟ್ನಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.04 ರೂಪಾಯಿ ಆಗಿದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 87.58 ರೂಪಾಯಿ ಅಗಿದೆ. ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 89.79 ರೂಪಾಯಿ ಆಗಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 82.74 ರೂಪಾಯಿಗೆ ಏರಿಕೆಯಾಗಿದೆ.

ಭಾರತದಲ್ಲಿ ಕೊವಿಡ್​ 19 ಹರಡುವಿಕೆಯನ್ನು ತಡೆಯಲು ವಿವಿಧ ರಾಜ್ಯಗಳು ಲಾಕ್​ಡೌನ್​ ಮೊರೆ ಹೋಗಿವೆ. ಹಾಗಿದ್ದಾಗ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆಯಾಗಿದೆ. ಮತ್ತು ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧನೆ ಹೇರಿರುವುದರಿಂದ ಇಂಧನ ಬೇಡಿಕೆಯಲ್ಲಿ ಕುಸಿತ ಕಂಡು ಬಂದಿದೆ.

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್