Petrol Diesel Price Today | ಪೆಟ್ರೋಲ್-ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯೂ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ನವೆಂಬರ್ 4ರಂದು ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಅಂದಿನಿಂದಲೂ ದೇಶದ ಯಾವುದೇ ಮಹಾನಗರಗಳಲ್ಲಿ ಇಂಧನ ದರ ಹಾಗೇ ಇದೆ. ಸದ್ಯ ರಾಷ್ಟ್ರದಲ್ಲಿ ಸುಮಾರು 27ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಮೇಲಿದೆ. ರಾಜ್ಯದಿಂದ ರಾಜ್ಯಕ್ಕೆ, ನಗರದಿಂದ ನಗರಕ್ಕೆ ಪೆಟ್ರೋಲ್-ಡೀಸೆಲ್ ಬೆಲೆ ಬೇರೆಯದ್ದೇ ಆಗಿರುತ್ತದೆ. ಅದು ಆಯಾ ರಾಜ್ಯಗಳ ವ್ಯಾಟ್ (VAT) ಮೇಲೆ ಅವಲಂಬಿತವಾಗಿರುತ್ತದೆ. ಲವೇ ದಿನಗಳ ಹಿಂದೆ ದೆಹಲಿಯ ಆಪ್ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.58 ರೂ. ಮತ್ತು ಡೀಸೆಲ್ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್ ದರ 100.08 ರೂ., ಡೀಸೆಲ್ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್ 99.76 ರೂ. ಮತ್ತು ಡೀಸೆಲ್ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 86.67 ರೂ. ಇದ್ದರೆ, ಪೆಟ್ರೋಲ್ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್ ದರ 109.98 ರೂ. ಮತ್ತು ಡೀಸೆಲ್ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್ ದರ 101.40 ರೂ. ಇದೆ. ಡೀಸೆಲ್ ದರ 91.43 ರೂ. ಆಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm