Petrol Price Today: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

| Updated By: Lakshmi Hegde

Updated on: Dec 23, 2021 | 8:28 AM

Petrol Rate Today, 23-12-2021: ನವೆಂಬರ್​ 4ರಂದು ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಅಂದಿನಿಂದಲೂ ದೇಶದ ಯಾವುದೇ ಮಹಾನಗರಗಳಲ್ಲಿ  ಇಂಧನ ದರ ಹಾಗೇ ಇದೆ

Petrol Price Today: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ
ಸಾಂದರ್ಭಿಕ ಚಿತ್ರ
Follow us on

Petrol Diesel Price Today | ಪೆಟ್ರೋಲ್​-ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯೂ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ನವೆಂಬರ್​ 4ರಂದು ದೀಪಾವಳಿ ಮುನ್ನಾದಿನ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಅಂದಿನಿಂದಲೂ ದೇಶದ ಯಾವುದೇ ಮಹಾನಗರಗಳಲ್ಲಿ  ಇಂಧನ ದರ ಹಾಗೇ ಇದೆ. ಸದ್ಯ ರಾಷ್ಟ್ರದಲ್ಲಿ ಸುಮಾರು 27ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್​ ದರ 100 ರೂಪಾಯಿ ಮೇಲಿದೆ. ರಾಜ್ಯದಿಂದ ರಾಜ್ಯಕ್ಕೆ, ನಗರದಿಂದ ನಗರಕ್ಕೆ ಪೆಟ್ರೋಲ್​-ಡೀಸೆಲ್​ ಬೆಲೆ ಬೇರೆಯದ್ದೇ ಆಗಿರುತ್ತದೆ. ಅದು ಆಯಾ ರಾಜ್ಯಗಳ ವ್ಯಾಟ್ (VAT) ಮೇಲೆ ಅವಲಂಬಿತವಾಗಿರುತ್ತದೆ.  ಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ?
ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

Published On - 8:27 am, Thu, 23 December 21