Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?

Petrol diesel Price Today: ನಿನ್ನೆ ಮಂಗಳವಾರ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 23 ಪೈಸೆ ಏರಿಕೆ ಮಾಡಲಾಯಿತು. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 94.49 ರೂ. ಆಗಿದ್ದರೆ, ಲೀಟರ್​ ಡೀಸೆಲ್​ ದರ 85.38 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 02, 2021 | 10:01 AM

ದೆಹಲಿ: ಇಂದು (ಜೂನ್ 2) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜೂನ್​ ತಿಂಗಳ ಪ್ರಾರಂಭದಿಂದಲೇ ಇಂಧನ ದರ ಏರಿಕೆ ಕಾಣಲು ಪ್ರಾರಂಭಿಸಿದೆ. ಆದರೆ ತಿಂಗಳ ಎರಡನೇ ದಿನದಂದು ತೈಲ ದರದಲ್ಲಿ ಹೆಚ್ಚಳವಾಗಿಲ್ಲ. ಏರುತ್ತಲೇ ಇರುವ ಇಂಧನ ದರದಿಂದಾಗಿ ಕೆಲವು ನಗರಗಳಲ್ಲಿ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ಇನ್ನು ಕೆಲವು ನಗರಗಳು ಶತಕದ ಗಡಿಯಲ್ಲಿವೆ. ಇದೇ ರೀತಿ ಮುಂದುವರೆದರೆ ಉಳಿದ ನಗರಗಳೂ ಸಹ ಶತಕ ಬಾರಿಸುವಲ್ಲಿ ಯಾವುದೇ ಸಂಶಯವಿಲ್ಲ. ಹಾಗಾದರೆ ಯಾವ ಯಾವ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ ಎಂಬುದನ್ನು ಪರಿಶೀಲಿಸಿ.

ನಿನ್ನೆ ಮಂಗಳವಾರ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 23 ಪೈಸೆ ಏರಿಕೆ ಮಾಡಲಾಯಿತು. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 94.49 ರೂ. ಆಗಿದ್ದರೆ, ಲೀಟರ್​ ಡೀಸೆಲ್​ ದರ 85.38 ರೂಪಾಯಿಗೆ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ವಾಣಿಜ್ಯ ನಗರಿ ಮುಂಬೈನಲ್ಲಿ ಈಗಾಗಲೇ ಶತಕ ಬಾರಿಸಿ, ಶತಕದ ಗಡಿ ದಾಟಿ ಮುನ್ನುಗ್ಗಿದೆ. ಲೀಟರ್​ ಪೆಟ್ರೊಲ್​ ದರ 100.72 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ಗೆ 95.99 ರೂ. ನಿಗದಿ ಮಾಡಲಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 94.50 ರೂ. ದಾಖಲಾಗಿದೆ. ಇನ್ನು, ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರವನ್ನು ರೂಪಾಯಿಗೆ ಏರಿಕೆ ಮಾಡಲಾಗಿದೆ. ಕಳೆದ ಮೇ ತಿಂಗಳ 4ನೇ ತಾರೀಕಿನಿಂದ ತಿಂಗಳ ಕೊನೆಯವರೆಗೆ ಒಟ್ಟು 16 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಇದೀಗ ಜೂನ್​ ತಿಂಗಳ ಮೊದಲನೇ ದಿನವೇ ಇಂಧನ ದರ ಏರಿಕೆ ಕಂಡಿತು. ಇಂದು ಬುಧವಾರ ತಿಂಗಳ ಎರಡನೇ ದಿನದಂದು ತೈಲ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ವಿವಿಧ ನಗರಗಳಲ್ಲಿ ಡೀಸೆಲ್​ ದರ ದೆಹಲಿಯಲ್ಲಿ ಲೀಟರ್​ ಡೀಸೆಲ್​ ಬೆಲೆ 85.38 ರೂ. ಆಗಿದೆ. ಅದೇರೀತಿ ಮುಂಬೈ ನಗರದಲ್ಲಿ 92.69 ರೂ. ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ 95.99 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ 88.23 ರೂ. ದಾಖಲಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಲೀಟರ್ ಡೀಸೆಲ್​ ದರ ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:56 am, Wed, 2 June 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ