ದೆಹಲಿ: ಇಂದು (ಜೂನ್ 3) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ಸೋಮವಾರ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 23 ಪೈಸೆ ಏರಿಕೆ ಮಾಡಲಾಯಿತು. ಆದಾದ ಬಳಿಕ ಸತತ ಎರಡು ಮೂರು ದಿನಗಳ ಕಾಲ ಇಂಧನ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 94.49 ರೂ ಹಾಗೂ ಲೀಟರ್ ಡೀಸೆಲ್ ದರ 85.38 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೊಲ್ ದರ 100.72 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ಗೆ 95.99 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 94.50 ರೂ. ದಾಖಲಾಗಿದೆ.
ಜೂನ್ ತಿಂಗಳ ಪ್ರಾರಂಭದಿಂದಲೇ ಇಂಧನ ದರ ಏರಿಕೆ ಕಾಣಲು ಪ್ರಾರಂಭಿಸು. ಏರುತ್ತಲೇ ಇರುವ ಇಂಧನ ದರದಿಂದಾಗಿ ಕೆಲವು ನಗರಗಳಲ್ಲಿ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗಿದೆ. ಇನ್ನು ಕೆಲವು ನಗರಗಳು ಶತಕದ ಗಡಿಯಲ್ಲಿವೆ.
ಕಳೆದ ಮೇ ತಿಂಗಳ 4ನೇ ತಾರೀಕಿನಿಂದ ತಿಂಗಳ ಕೊನೆಯವರೆಗೆ ಒಟ್ಟು 16 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಇದೀಗ ಜೂನ್ ತಿಂಗಳ ಮೊದಲನೇ ದಿನವೇ ಇಂಧನ ದರ ಏರಿಕೆ ಕಂಡಿತು. ತದನಂತರ ಸತತ ಮೂರು ದಿನಗಳ ಕಾಲ ಇಂಧನ ದರದಲ್ಲಿ ಏರಿಕೆ ಕಂಡು ಬಂದಿಲ್ಲ. ಇಂದು ಗುರವಾರ ತೈಲ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ.
ದೆಹಲಿಯಲ್ಲಿ ಲೀಟರ್ ಡೀಸೆಲ್ ಬೆಲೆ 85.38 ರೂಪಾಯಿ ಇದೆ. ಅದೇರೀತಿ ಮುಂಬೈ ನಗರದಲ್ಲಿ 92.69 ರೂ. ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ 95.99 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ 88.23 ರೂ. ದಾಖಲಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಲೀಟರ್ ಡೀಸೆಲ್ ದರ ರೂಪಾಯಿಗೆ ಏರಿಕೆಯಾಗಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 10:10 am, Thu, 3 June 21