Petrol Price Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?

Petrol diesel Price Today: ಸರ್ಕಾರಿ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೋಲ್​ ದರದಲ್ಲಿ 29 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 26 ಪೈಸೆ ಏರಿಕೆ ಮಾಡಿದೆ.

Petrol Price Today: ಇಂದೂ ಏರಿದ ಪೆಟ್ರೋಲ್​, ಡೀಸೆಲ್​ ದರ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 31, 2021 | 9:35 AM

ದೆಹಲಿ: ಇಂದು ಸೋಮವಾರ (ಮೇ 31) ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆ ಆಗಿದೆ. ಮೇ 4ರಿಂದ ಏರಿಕೆಯತ್ತ ಸಾಗಲು ಪ್ರಾರಂಭಿಸಿದ ಇಂಧನ ದರ ಇವತ್ತಿಗೆ ಒಟ್ಟು 16 ಬಾರಿ ಏರಿಕೆ ಕಂಡಿದೆ. ಸರ್ಕಾರಿ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೋಲ್​ ದರದಲ್ಲಿ 29 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 26 ಪೈಸೆ ಏರಿಕೆ ಮಾಡಿದೆ. ದರ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 94.23 ರೂಪಾಯಿಗೆ ಏರಿಕೆ ಆಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 85.15 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 97.37 ರೂಪಾಯಿ ಆಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 90.27 ರೂಪಾಯಿ ಆಗಿದೆ.

ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಸತತವಾಗಿ 18 ದಿನಗಳ ಕಾಲ ಇಂಧನ ದರ ಬದಲಾವಣೆ ಹೊಂದಿರಲಿಲ್ಲ. ಅದಾದ ಬಳಿಕ ಮೇ 4ರಿಂದ ತೈಲ ದರ ಏರಿಕೆ ಕಾಣಲು ಪ್ರಾರಂಭಿಸಿತು. ಮೇ ತಿಂಗಳಿನಲ್ಲಿಯೇ ಒಟ್ಟು 16 ಬಾರಿ ಹೆಚ್ಚಳಗೊಂಡ ಪೆಟ್ರೋಲ್​ ಮತ್ತು ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಈ ಮೊದಲೇ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಭೂಪಾಲ್​ನ ಕೆಲ ನಗರಗಳಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿತ್ತು. ಅದಾದ ಬಳಿಕ ಮೇ 29ನೇ ತಾರೀಕಿನಂದು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿತು. ಇದೀಗ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 100.47 ರೂ. ಹಾಗೂ ಲೀಟರ್​ ಡೀಸೆಲ್​ ದರ 89.90 ರೂ. ದಾಖಲಾಗಿದೆ. ಇನ್ನು ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ಗೆ 94.25 ರೂ. ನಿಗದಿಯಾಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 88 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ  ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ