
ದೆಹಲಿ: ಇಂದು ಗುರವಾರ (ಮೇ 27) ತೈಲ ದರಗಳು ಏರಿಕೆ ಆಗಿವೆ. ಸರ್ಕಾರಿ ತೈಲ ಕಂಪನಿಗಳು ಇಂದು ಇಂಧನ ದರ ಪರಿಷ್ಕರಿಸಿದ ಬಳಿಕ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 29 ಪೈಸೆ ಏರಿಕೆ ಮಾಡಿವೆ. ಮೇ ತಿಂಗಳಿನ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರ 14 ಬಾರಿ ಏರಿಕೆ ಕಂಡಿದೆ. ಈ ಮೂಲಕ ತೈಲ ದರ ಲೀಟರ್ ಪೆಟ್ರೋಲ್ನಲ್ಲಿ 3.33 ರೂ ಹಾಗೂ ಲೀಟರ್ ಡೀಸೆಲ್ ದರ 3.85 ರೂ ಹೆಚ್ಚಳವಾಗಿದೆ. ದರ ಏರಿಕೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.
ರಾಜಸ್ಥಾನ, ಮಹಾರಾಷ್ಟ್ರ, ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ ಈಗಾಗಲೇ 100ರ ಗಡಿ ದಾಟಿದೆ. ಇನ್ನು ಕೆಲ ಪೈಸೆಗಳಷ್ಟು ಹೆಚ್ಚಳವಾದರೆ ಮುಂಬೈ ನಗರವೂ ಕೂಡ ಇವುಗಳ ಗುಂಪಿಗೆ ಸೇರಿಕೊಳ್ಳುತ್ತದೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್ ಪೆಟ್ರೋಲ್ ರ 104.67 ರೂಪಾಯಿಗೆ ಹೆಚ್ಚಳವಾಗಿದೆ.
ಇಂದು ಇಂಧನ ದರ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 93.68 ರೂಪಾಯಿಗೆ ಏರಿಕೆ ಆಗಿದೆ. ಹಾಗೂ ಲೀಟರ್ ಡೀಸೆಲ್ ದರದಲ್ಲಿ 84.61 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್ ಪೆಟ್ರೋಲ್ನಲ್ಲಿ 99.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.87 ರೂಪಾಯಿಗೆ ಹೆಚ್ಚಳವಾಗಿದೆ.
ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.39 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 93.72 ರೂ. ಹಾಗೂ ಲೀಟರ್ ಡೀಸೆಲ್ ದರ 87.46 ರೂಪಅಯಿ ಆಗಿದೆ. ಭೋಪಾಲ್ನಲ್ಲಿ ಪೆಟ್ರೋಲ್ ಲೀಟರ್ಗೆ 101.77 ರೂಪಾಯಿಗೆ ಏರಿಕೆ ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ 93.07 ರೂಪಾಯಿ ದಾಖಲಾಗಿದೆ.
ಇನ್ನು, ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ದರ 96.80 ರೂ. ಹಾಗೂ ಲೀಟರ್ ಡೀಸೆಲ್ ದರ 89.70 ರೂಪಾಯಿಗೆ ಹೆಚ್ಚಳವಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 91.21 ರೂಪಾಯಿ ಹಾಗೂ ಲೀಟರ್ ಡೀಸೆಲ್ 85 ರೂಪಾಯಿ ಆಗಿದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ95.85 ರೂ. ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿಗೆ ಜಿಗಿದಿದೆ. ಇನ್ನು, ಜೈಪುರದಲ್ಲಿ ಪೆಟ್ರೋಲ್ ಲೀಟರ್ಗೆ 100.17 ರೂ. ಹಾಗೂ ಲೀಟರ್ ಡೀಸೆಲ್ ದರ 93.36 ರೂ. ಆಗಿದೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:55 am, Thu, 27 May 21