ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು (ಮೇ 29) ಇಂಧನ ದರವನ್ನು ಪರಿಷ್ಕರಿಸಿದ ನಂತರ ಪೆಟ್ರೋಲ್ ಲೀಟರ್ಗೆ 25 ರಿಂದ 26 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರ್ಗೆ 28 ರಿಂದ 30 ಪೈಸೆಗಳಿಗೆ ಏರಿಕೆ ಮಾಡಿವೆ. ಆ ಮೂಲಕ ಇಂದು ಶನಿವಾರ ಮತ್ತೆ ತೈಲ ದರಗಳು ಏರಿಕೆ ಆಗಿವೆ. ಮೇ ತಿಂಗಳಲ್ಲಿ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರ 15 ಬಾರಿ ಏರಿಕೆ ಕಂಡಿದೆ. ಅಲ್ಲದೆ ದರ ಏರಿಕೆಯಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಸಾರ್ವಕಾಲಿಕ ಗರಿಷ್ಠಮಟ್ಟ ತಲುಪಿದೆ.
ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100 ರೂಪಾಯಿಯ ಗಡಿ ದಾಟಿದ್ದು, ಆ ಮೂಲಕ ಪೆಟ್ರೋಲ್ ಬೆಲೆ ಲೀಟರ್ಗೆ 100.19 ರೂಪಾಯಿಯಾದರೆ, ಡಿಸೇಲ್ ಬೆಲೆ ಲೀಟರ್ಗೆ 92.17 ರೂಪಾಯಿಯಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 93.94 ರೂಪಾಯಿಯಾದರೆ, ಡೀಸೆಲ್ ಬೆಲೆ ಲೀಟರ್ಗೆ 84.89 ರೂಪಾಯಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 97.07 ರೂಪಾಯಿ ಮತ್ತು ಡೀಸೆಲ್ ದರ ಲೀಟರ್ಗೆ 89.99 ರೂಪಾಯಿಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 93.97 ರೂಪಾಯಿಯಾದರೆ, ಡೀಸೆಲ್ ಬೆಲೆ ಲೀಟರ್ಗೆ 87.74 ರೂಪಾಯಿಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 95.51 ರೂಪಾಯಿಯಾದರೆ, ಡೀಸೆಲ್ ಬೆಲೆ ಲೀಟರ್ಗೆ 89.65 ರೂಪಾಯಿಯಾಗಿದೆ.
ಪ್ರತಿದಿನ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತದೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಹೊಸ ದರಗಳು ನಿಗದಿಯಾದಾಗ ಬೆಳಿಗ್ಗೆ 6 ಗಂಟೆಯಿಂದ ಅದು ಅನ್ವಯವಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
Petrol Price Today: ಸ್ಥಿರತೆಯಲ್ಲಿ ಪೆಟ್ರೋಲ್, ಡೀಸೆಲ್ ದರ; ವಿವಿಧ ನಗರಗಳಲ್ಲಿನ ಇಂಧನದ ಬೆಲೆ ವಿವರ ಹೀಗಿದೆ
Published On - 9:28 am, Sat, 29 May 21