Petrol Diesel Rate: ಏರುತ್ತಲೇ ಇದೆ ಪೆಟ್ರೋಲ್​, ಡೀಸೆಲ್​ ಬೆಲೆ; ಮೇ 7ರಂದೂ ತೈಲ ದರ ಹೆಚ್ಚಳ

Petrol Price in Bangalore: ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್​ ಪೆಟ್ರೋಲ್​ 94.30 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 86.64 ರೂಪಾಯಿಗೆ ಏರಿಕೆಯಾಗಿದೆ.

Petrol Diesel Rate: ಏರುತ್ತಲೇ ಇದೆ ಪೆಟ್ರೋಲ್​, ಡೀಸೆಲ್​ ಬೆಲೆ; ಮೇ 7ರಂದೂ ತೈಲ ದರ ಹೆಚ್ಚಳ
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us
|

Updated on:May 09, 2021 | 9:05 AM

ದೆಹಲಿ: ಮೇ ತಿಂಗಳಿನಲ್ಲಿ ಸತತವಾಗಿ 4ನೇ ದಿನವೂ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯಾಗಿದೆ. ಇಂದು ಮೇ 7ನೇ ತಾರೀಕಿನಂದು ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್​ ದರವನ್ನು 25 ರಿಂದ 28 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 30ರಿಂದ 33 ಪೈಸೆಗೆ ಏರಿಕೆ ಮಾಡಿದೆ. ದೆಹಲಿಯಲ್ಲಿ ಇಂದು ಪೆಟ್ರೋಲ್​ ದರ 91.27 ರೂ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.73 ರೂ. ಆಗಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್​ ಪೆಟ್ರೋಲ್​ 94.30 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 86.64 ರೂಪಾಯಿಗೆ ಏರಿಕೆಯಾಗಿದೆ.

ನಿನ್ನೆ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.99 ರೂಪಾಯಿ ಆಗಿತ್ತು. ಇಂದು 28 ಪೈಸೆ ಏರಿಕೆ ನಂತರ 91.27 ರೂಪಾಯಿ ಆಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ ನಿನ್ನೆ 81.42 ರೂಪಾಯಿ ಆಗಿತ್ತು. ಇಂದು ದರ ಏರಿಕೆಯ ನಂತರ 81.73 ರೂಪಾಯಿ ಆಗಿದೆ. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡಿರುವ ಪೆಟ್ರೋಲ್​ ಒಟ್ಟು 72 ಪೈಸೆ ಏರಿಕೆಯಾಗಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 86 ಪೈಸೆ ಹೆಚ್ಚಳವಾಗಿದೆ.

ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 97.61 ರೂಪಾಯಿಗೆ ಏರಿಕೆಯಾಗಿದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಅತಿ ಹೆಚ್ಚು ಪೆಟ್ರೋಲ್​ ದರ ಹೊಂದಿದ ನಗರ ಮುಂಬೈ ಎಂದು ವಿಷ್ಲೇಶಿಸಬಹುದಾಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ ಮುಂಬೈ ನಗರದಲ್ಲಿ 88.82 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 91.41 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 84.57 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.15 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 86.65 ರೂಪಾಯಿಗೆ ಏರಿಕೆಯಾಗಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪೆಟ್ರೋಲ್​, ಡೀಸೆಲ್​ ದರ ಗರಿಷ್ಠ ಮಟ್ಟದಲ್ಲಿದೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 101.43 ರೂಪಾಯಿ ಇದೆ. ಪ್ರತಿ ಲೀಟರ್​ ಡೀಸೆಲ್​ ದರ 93.54 ರೂಪಾಯಿ ಇದೆ. ಹಾಗೂ ಮಧ್ಯಪ್ರದೇಶದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 101.15 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 91.56 ರೂಪಾಯಿ ಇದೆ.

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:45 am, Fri, 7 May 21

ಗಣ್ಯರ ಅಗಮನದಿಂದ ಮತ್ತಷ್ಟು ಹೆಚ್ಚಲಿದೆ ನೂಕುನುಗ್ಗಲು, ಪೊಲೀಸರಿಗೆ ಸವಾಲು
ಗಣ್ಯರ ಅಗಮನದಿಂದ ಮತ್ತಷ್ಟು ಹೆಚ್ಚಲಿದೆ ನೂಕುನುಗ್ಗಲು, ಪೊಲೀಸರಿಗೆ ಸವಾಲು
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ