Petrol Diesel Rate Today: ಸತತ ಎರಡು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಹೀಗಿದೆ ತೈಲ ದರ

|

Updated on: May 20, 2021 | 9:20 AM

Petrol Diesel Price Today: ಸತತವಾಗಿ ಎರಡನೇ ದಿನ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸರ್ಕಾರಿ ತೈಲ ಕಂಪನಿಗಳು ಗುರವಾರ ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Diesel Rate Today: ಸತತ ಎರಡು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಹೀಗಿದೆ ತೈಲ ದರ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಸತತವಾಗಿ ಎರಡನೇ ದಿನ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸರ್ಕಾರಿ ತೈಲ ಕಂಪನಿಗಳು ಗುರವಾರ ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಮಂಗಳವಾರ ತೈಲ ದರವನ್ನು ಏರಿಸಲಾಗಿತ್ತು. ಆ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​ ಪೆಟ್ರೋಲ್​ ದರ 92.85 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 83.51 ರೂಪಾಯಿ ಆಗಿದೆ. ಹಾಗೆಯೇ ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 95.94 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 88.53 ರೂಪಾಯಿ ಆಗಿದೆ. 

ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಗೆ ತೈಲ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಹೊಸ ದರಗಳು ಬೆಳ್ಳಿಗ್ಗೆ 6 ಗಂಟೆಯಿಂದ ಅನ್ವಯವಾಗುತ್ತದೆ. ವಿದೇಶಿ ವಿನಿಮಯ ದರದ ಜತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳ ಆಧಾರದ ಮೇಲೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಗಳು ನಿರ್ಧಾರವಾಗುತ್ತದೆ.

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 92.85 ರೂಪಾಯಿ ಇದ್ದರೆ, ಪ್ರತಿ ಲೀಟರ್​ ಡೀಸೆಲ್​ ದರ 83.51 ರೂಪಾಯಿ ಇದೆ. ಹಾಗೆಯೇ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 99.14 ರೂಪಾಯಿ ತಲುಪಿದ್ದು ಲೀಟರ್​ ಡೀಸೆಲ್​ ದರ 90.71 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.92 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 86.35 ರೂಪಾಯಿ ಇದೆ.

ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ರಾಜಸ್ಥಾನ, ಮಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಸಾರ್ವಕಾಲಿಕ ಗರಿಷ್ಠ ದಾಖಲೆ ಸೃಷ್ಟಿಸಿದೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 103.80 ರೂಪಾಯಿ ತಲುಪಿದ್ದು, ಪ್ರತಿ ಲೀಟರ್​ ಡೀಸೆಲ್​ ದರ 96.30 ರೂಪಾಯಿ ಆಗಿದೆ. ಸ್ಥಳೀಯ ತೆರಿಗೆಗಳು ಮತ್ತು ವಿಧಿಸಿದ ವ್ಯಾಟ್​ಗಳಿಗೆ ಅನುಸಾರವಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ.

ನಗರ                 ಪೆಟ್ರೋಲ್ ದರ (ಲೀ.)   ಡೀಸೆಲ್ ದರ (ಲೀ)
ದೆಹಲಿ                 92.85                            83.51
ಕೋಲ್ಕತಾ          92.92                            86.35
ಮುಂಬೈ             99.14                             90.71
ಚೆನ್ನೈ                 94.54                            88.34
ಬೆಂಗಳೂರು        95.94                           88.53
ಹೈದರಾಬಾದ್    96.50                          91.04
ಶ್ರೀ ಗಂಗನಗರ     103.80                       96.30
ಜೈಪುರ                 99.30                         92.18
ಪಾಟ್ನಾ                95.05                         88.75
ಲಕ್ನೋ                 90.57                        83.89

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html