Petrol Price Today: ಸ್ಥಿರತೆಯಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ; ವಿವಿಧ ನಗರಗಳಲ್ಲಿನ ತೈಲ ದರ ವಿವರ ಇಲ್ಲಿದೆ

Petrol Diesel Rate Today: ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಇಂದು (ಮೇ 24) ಬದಲಾವಣೆಗಳಿಲ್ಲ. ನಿನ್ನೆ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 15 ರಿಂದ 17 ಪೈಸೆ ಹಾಗೂ ಲೀಟರ್​ ಡೀಸೆಲ್​ ಬೆಲೆಯಲ್ಲಿ 25 ರಿಂದ 29 ಪೈಸೆ ಹೆಚ್ಚಳ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ; ವಿವಿಧ ನಗರಗಳಲ್ಲಿನ ತೈಲ ದರ ವಿವರ ಇಲ್ಲಿದೆ
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
Follow us
shruti hegde
| Updated By: Digi Tech Desk

Updated on:May 24, 2021 | 10:14 AM

ದೆಹಲಿ: ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಇಂದು (ಮೇ 24) ಬದಲಾವಣೆಗಳಿಲ್ಲ. ನಿನ್ನೆ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 15 ರಿಂದ 17 ಪೈಸೆ ಹಾಗೂ ಲೀಟರ್​ ಡೀಸೆಲ್​ ಬೆಲೆಯಲ್ಲಿ 25 ರಿಂದ 29 ಪೈಸೆ ಹೆಚ್ಚಳ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಲ್ಲಿಯವರೆಗಿನ ದರ ಹೆಚ್ಚಳದಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಒಟ್ಟು 2,69 ರೂ. ಹಾಗೂ ಲೀಟರ್​ ಡೀಸೆಲ್​ ದರ 3.07 ರೂ. ಏರಿಕೆ ಆಗಿದೆ.

ಈ ತಿಂಗಳಿನಲ್ಲಿ(ಮೇ) ಇಲ್ಲಿಯವರೆಗೆ ಒಟ್ಟು 12 ದಿನಗಳ ಕಾಲ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 96.31 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 89.12 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 96.88 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 91.65 ರೂಪಾಯಿಗೆ ಏರಿಕೆ ಆಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬುದನ್ನು ಗಮನಿಸಿದಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 93.21 ರೂ. ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 84.07 ರೂಪಾಯಿ ಇದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಶತಕದ ಅಂಚಿನಲ್ಲಿ ಪೆಟ್ರೋಲ್​ ಬೆಲೆಯಿದ್ದು ಲೀಟರ್​ ಪೆಟ್ರೋಲ್ ಬೆಲೆ 99.49 ರೂ. ಹಾಗೂ ಲೀಟರ್​ ಡೀಸೆಲ್​ ದರ 91.30 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 94.86 ರೂಪಾಯಿ ಹಾಗೆಯೇ ಲೀಟರ್​ ಡೀಸೆಲ್​ ದರ 88.87 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.27 ಹಾಗೂ ಲೀಟರ್​ ಡೀಸೆಲ್​ ದರ 86.91 ರೂಪಾಯಿ ಇದೆ.

ತೈಲ ದರ ಹೆಚ್ಚಳದಿಂದಾಗಿ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಅಂತೆಯೇ ಇನ್ನು ಕೆಲವು ನಗರಗಳಲ್ಲಿ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದ್ದು, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಇನ್ನು ಲೆಕ ಪೈಸೆಗಳ್ಟು ದರ ಏರಿಕೆ ಕಂಡರೂ ಮುಂವೈ ನಗರವೂ ಕೂಡಾ ಇವುಗಳ ಸಾಲಿಗೆ ಸೇರಿಕೊಳ್ಳಲಿದೆ. ಲಾಕ್​ಡೌನ್​ ಜಾರಿಯಲ್ಲಿದ್ದು ಅನಗತ್ಯ ಓಡಾಟಗಳು ಇಲ್ಲದಿದ್ದರೂ ತೈಲ ದರ ಮಾತ್ರ ಏರುತ್ತಲೇ ಸಾಗುತ್ತಿದೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:53 am, Mon, 24 May 21

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್