Petrol Price Today: ಸ್ಥಿರತೆಯಲ್ಲಿ ಇಂಧನ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ
Petrol Diesel Rate Today: ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 71 ರೂಪಾಯಿಯಂತೆ ವಹಿವಾಟು ನಡೆಸುತ್ತಿದೆ. ಈ ಕಾರಣದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದು (ಜೂನ್ 5) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ತೈಲ ಕಂಪನಿಗಳು ಶುಕ್ರವಾರ (ಜೂನ್ 4) ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 28 ಪೈಸೆ ಹೆಚ್ಚಿಸಿದೆ. ದೇಶದ 135 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ. ಇನ್ನು ಈ ವರ್ಷದ ಪೆಟ್ರೋಲ್ ಬೆಲೆ ಇದುವರೆಗೆ ಸುಮಾರು 13 ಪ್ರತಿಶತದಷ್ಟು ಹೆಚ್ಚಾಗಿದೆ. ಇದೇ ಸಮಯದಲ್ಲಿ, ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 71 ರೂಪಾಯಿಯಂತೆ ವಹಿವಾಟು ನಡೆಸುತ್ತಿದೆ. ಈ ಕಾರಣದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಐದು ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ರಾಜಧಾನಿ ದೆಹಲಿಯಲ್ಲಿ ಇಂದು ಒಂದು ಲೀಟರ್ ಪೆಟ್ರೋಲ್ ಬೆಲೆ 94.76 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 85.66 ರೂಪಾಯಿ, ಅದೇ ರೀತಿ ಮುಂಬೈಯಲ್ಲಿ ಪೆಟ್ರೋಲ್ ಲೀಟರ್‌ಗೆ 100.98 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 92.69 ರೂಪಾಯಿ, ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 94.76 ರೂಪಾಯಿ ಮತ್ತು ಡೀಸೆಲ್ ಬೆಲೆ 88.51 ರೂಪಾಯಿ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.23 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 90.38 ರೂಪಾಯಿ. ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ದರ 97.92 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 90.81 ರೂಪಾಯಿಯಾಗಿದೆ.
ಕರ್ನಾಟಕದಲ್ಲಿನ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ನ ಬೆಲೆ ಲೀಟರ್‌ಗೆ 99.80 ರೂಪಾಯಿ. ಗದಗ ಜಿಲ್ಲೆಯಲ್ಲಿ ಪೆಟ್ರೋಲ್ನ ಬೆಲೆ ಲೀಟರ್‌ಗೆ 98.30 ರೂಪಾಯಿ ಮತ್ತು ಡಿಸೇಲ್ ಲೀಟರ್‌ಗೆ 91.19 ರೂಪಾಯಿ, ಕಾರವಾರ ಜಿಲ್ಲೆಯಲ್ಲಿ ಪೆಟ್ರೋಲ್ ನ ಬೆಲೆ 99.50 ರೂಪಾಯಿ, ತುಮಕೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 98.30 ರೂಪಾಯಿ, ಕಲಬುರಗಿ ಜಿಲ್ಲೆಯಲ್ಲಿ ಪೆಟ್ರೋಲ್ನ ಬೆಲೆ ಲೀಟರ್‌ಗೆ 97.74 ರೂಪಾಯಿ ಮತ್ತು ಡಿಸೇಲ್ ಲೀಟರ್‌ಗೆ 90.68 ರೂಪಾಯಿ, ಬೀದರ್ ಪೆಟ್ರೋಲ್ ದರ 98.78 ರೂಪಾಯಿ, ವಿಜಯಪುರ ಜಿಲ್ಲೆಯಲ್ಲಿ ಪೆಟ್ರೋಲ್ನ ಬೆಲೆ ಲೀಟರ್‌ಗೆ 97.68 ರೂಪಾಯಿ ಮತ್ತು ಡಿಸೇಲ್ ಲೀಟರ್‌ಗೆ 90.62 ರೂಪಾಯಿ.
ಡೀಸೆಲ್ ಬೆಲೆ ಕೂಡ 100 ರ ಗಡಿ ದಾಟುವ ಸಾಧ್ಯತೆ ದೇಶದ ಅತ್ಯಂತ ದುಬಾರಿ ಪೆಟ್ರೋಲ್ ಅಂದರೆ ಅದು ರಾಜಸ್ಥಾನದ ಶ್ರೀಗಂಗನಗರ. ಇಲ್ಲಿ ಪೆಟ್ರೋಲ್ ಲೀಟರ್‌ಗೆ 105.80 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 98.63 ರೂಪಾಯಿ. ಈ ರೀತಿ ಬೆಲೆ ಏರಿಕೆಯಾಗುತ್ತಿದ್ದರೆ, ಮುಂದಿನ ದಿನಗಳಲ್ಲಿ ಪೆಟ್ರೋಲ್ ಕೂಡ ಇಲ್ಲಿ ಪ್ರತಿ ಲೀಟರ್‌ಗೆ 100 ರೂಪಾಯಿ ಆಗುವ ಸಾಧ್ಯತೆ ಇದೆ. ಮುಂಬೈಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 101 ರೂಪಾಯಿಗೆ ತಲುಪಿದ್ದರೆ, ಡೀಸೆಲ್ ಸುಮಾರು 93 ರೂಪಾಯಿಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ನ ಬೆಲೆಯನ್ನು ಪ್ರತಿ ದಿನ ಬೆಳಿಗ್ಗೆ ಪರಿಷ್ಕರಿಸಲಾಗುತ್ತದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ಸುಮಾರು ಮೂರು ಪಟ್ಟು ಹೆಚ್ಚಾಗುತ್ತದೆ. ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಗಳು ಯಾವುವು ಎಂಬುದರ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ.
ಇದನ್ನೂ ಓದಿ:
Petrol Price Today: ಸ್ಥಿರತೆಯಲ್ಲಿ ಇಂಧನ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ವಿವರ ಹೀಗಿದೆ
Published On - 9:22 am, Sat, 5 June 21