AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ

Petrol Diesel Rate Today: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ
ಪಿಟಿಐ ಚಿತ್ರ
shruti hegde
|

Updated on: May 26, 2021 | 8:49 AM

Share

ದೆಹಲಿ: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಂಧನ ದರ ಏರಿಕೆಯಿಂದಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಮೇ ತಿಂಗಳಿನಲ್ಲಿ ಒಟ್ಟು 13 ಬಾರಿ ಏರಿಕೆ ಮಾಡಲಾಗಿದೆ. ಈ ಮೂಲಕ ಕೆಲವು ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿವೆ. ಇನ್ನು ಕೆಲವು ನಗರಗಳು ಗಡಿಯ ಅಂಚಿನಲ್ಲಿವೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಭೂಪಾಲ್​ನಲ್ಲಿಯೂ ಲೀಟರ್​ ಪೆಟ್ರೋಲ್​ 100ರ ಗಡಿ ದಾಟಿದ್ದು, 101.52 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್​ ದರ 92.77 ರೂಪಾಯಿ ಇದೆ.

ಇನ್ನೇನು ಕೆಲ ಪೈಸೆಗಳಷ್ಟು ಏರಿಕೆ ಕಂಡರೆ ಮುಂಬೈ ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ. ಲೀಟರ್​ ಪೆಟ್ರೋಲ್​ ದರ 99.71 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 91.57 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​87.91 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.06 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 89.11 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 96.55 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ಅನ್ನು 89.39 ರೂಪಾಯಿ ಇದೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
shruti hegde
shruti hegde
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ