Petrol Price Today: ಪೆಟ್ರೋಲ್​ ದರ 100 ರೂ ದಾಟಿದ ಬಳಿಕ ಮುಂಬೈನಲ್ಲಿ ಇಂಧನ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ

Petrol diesel Price Today: ಇಂದು (ಮೇ 30) ಇಂಧನ ದರ ಸ್ಥಿರತೆಯನ್ನು ಕಾಪಾಡಿಕೊಂಡಿದೆ. ಸರ್ಕಾರಿ ತೈಲ ಕಂಪನಿಗಳು ಪೆಟ್ರೊಲ್​ ಮತ್ತು ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Price Today: ಪೆಟ್ರೋಲ್​ ದರ 100 ರೂ ದಾಟಿದ ಬಳಿಕ ಮುಂಬೈನಲ್ಲಿ ಇಂಧನ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 30, 2021 | 9:03 AM

ದೆಹಲಿ: ಮೇ ತಿಂಗಳಿನಲ್ಲಿ ಒಟ್ಟಾರೆಯಾಗಿ 15 ಬಾರಿ ಇಂಧನ ದರ ಏರಿಕೆ ಕಂಡಿದೆ. ನಿನ್ನೆ ಶನಿವಾರ ಮತ್ತೆ ಪೆಟ್ರೋಲ್​ ಮತ್ತು ಡೀಸೆಲ್​ ದರ ಹೆಚ್ಚಳವಾಗಿದ್ದು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಅದಾದ ನಂತರ ಇಂದು (ಮೇ 30) ಇಂಧನ ದರ ಸ್ಥಿರತೆಯನ್ನು ಕಾಪಾಡಿಕೊಂಡಿದೆ. ಸರ್ಕಾರಿ ತೈಲ ಕಂಪನಿಗಳು ಪೆಟ್ರೊಲ್​ ಮತ್ತು ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ನಿನ್ನೆ (ಮೇ 29) ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿತ್ತು. ಆ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 93.94 ರೂಪಾಯಿ  ಹಾಗೆಯೇ ಲೀಟರ್​ ಡೀಸೆಲ್​ ದರ 84.89 ರೂಪಾಯಿಗೆ ಏರಿಕೆ ಆಗಿದೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರ ಪರಿಷ್ಕರಣೆಯಲ್ಲಿ ಸತತ 18 ದಿನಗಳ ಕಾಲ ವಿರಾಮವನ್ನು ತೆಗೆದುಕೊಂಡಿತ್ತು. ಆ ನಂತರ ಮೇ 4ರಿಂದ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 15 ದಿನಗಳ ಕಾಲ ತೈಲ ದರ ಏರಿಕೆ ಆಗಿದೆ. ಆ ಮೂಲಕ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್​ಗೆ 97.07 ರೂಪಾಯಿ ಮತ್ತು ಡೀಸೆಲ್ ದರ ಲೀಟರ್​ಗೆ 89.99 ರೂಪಾಯಿಯಾಗಿದೆ.

ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.94 ರೂ. ಹಾಗೂ ಲೀಟರ್​ ಡೀಸೆಲ್​ ದರ 97.79 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಮೊದಲ ಬಾರಿಗೆ ಶತಕ ಬಾರಿಸಿದ್ದು ಲೀಟರ್ ಪೆಟ್ರೋಲ್​ ದರ 100.19 ರೂ ಹಾಗೂ ಲೀಟರ್​ ಡೀಸೆಲ್​ ದರ 92.17 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.97 ರೂ ಹಾಗೂ ಲೀಟರ್​ ಡೀಸೆಲ್​ ದರ 87.74 ರೂ ದಾಖಲಾಗಿದೆ. ಅದೇ ರಿತಿ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.51 ರೂ ಹಾಗೂ ಲೀಟರ್​ ಡೀಸೆಲ್​ ದರ 89.65 ರೂ ನಿಗದಿಯಾಗಿದೆ.

ವಿಧಿಸುವ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಗ್ಯಕ್ಕೆ ಬದಲಾಗುತ್ತವೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ತೆರಿಗೆಯನ್ನು(ವ್ಯಾಟ್) ವಿಧಿಸುತ್ತದೆ. ನಂತರದ ಸ್ಥಾನ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಕ್ಕಿದೆ.

ಪ್ರತಿದಿನ ಬೆಳಿಗ್ಗೆ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ವ್ಯಾಪಾರಿ ಆಯೋಗ ಮತ್ತು ಇತರ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ  ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ