ಜಾರ್ಖಂಡ್ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 25 ರೂ.ಕಡಿತ ಘೋಷಿಸಿದ ಸಿಎಂ; ಆದರೆ ಇಲ್ಲಿದೆ ಒಂದು ಟ್ವಿಸ್ಟ್ !
ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ.
ಸದ್ಯ ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಅಧಿಕವಾಗಿದೆ. 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್ ದರ ಲೀಟರ್ಗೆ 100 ರೂಪಾಯಿ ಇದೆ. ದೀಪಾವಳಿ ಹಬ್ಬದ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದ ಮೇಲೆ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಹಲವು ರಾಜ್ಯಗಳೂ ಸಹ ವ್ಯಾಟ್ ಕಡಿತಗೊಳಿಸಿದ್ದವು. ಆದರೆ ಇದೀಗ ಜಾರ್ಖಂಡ ಸರ್ಕಾರ ಒಂದು ಮಹತ್ವದ ಘೋಷಣೆ ಮಾಡಿದೆ. ಪೆಟ್ರೋಲ್ ಬೆಲೆಯಲ್ಲಿ 25 ರೂಪಾಯಿ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಇಂದು ಘೋಷಿಸಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ.
ಇಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಾರ್ಯಾಲಯ, ಪೆಟ್ರೋಲ್-ಡೀಸೆಲ್ ನಿರಂತರವಾಗಿ ಏರಿದ ಹಿನ್ನೆಲೆಯಲ್ಲಿ ಬಡವರಿಗೆ-ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿದೆ. ಹಾಗಾಗಿ 2022ರ ಜನವರಿ 26ರಿಂದ ದ್ವಿಚಕ್ರವಾಹನ ಸವಾರರಿಗೆ ಮಾತ್ರ ಅನ್ವಯ ಆಗುವಂತೆ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 25 ರೂ.ಕಡಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಘೋಷಿಸಿದ್ದಾರೆ ಎಂದು ತಿಳಿಸಿದೆ. ಬಡವರು-ಮಧ್ಯಮದವರು ಹೇಗೋ ಕಷ್ಟಪಟ್ಟು ದ್ವಿಚಕ್ರವಾಹನ ಖರೀದಿ ಮಾಡುತ್ತಾರೆ. ಆದರೆ ಅವರಿಗೆ ಪೆಟ್ರೋಲ್ ಹೊರೆಯಾಗುತ್ತಿದೆ. ವಾಹನವಿದ್ದರೂ ಅದನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಂಥವರಿಗೆ ಸಹಾಯವಾಗಲಿ ಎಂದು ಪೆಟ್ರೋಲ್ ದರವನ್ನು ಕಡಿಮೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ ಎನ್ನಲಾಗಿದೆ.
पेट्रोल-डीजल के मूल्य में लगातार इजाफा हो रहा है, इससे गरीब और मध्यम वर्ग के लोग सबसे अधिक प्रभावित हैं। इसलिए सरकार ने राज्य स्तर से दुपहिया वाहन के लिए पेट्रोल पर प्रति लीटर ₹25 की राहत देगी, इसका लाभ 26 जनवरी 2022 से मिलना शुरू होगा:- श्री @HemantSorenJMM pic.twitter.com/MsinoGS60Y
— Office of Chief Minister, Jharkhand (@JharkhandCMO) December 29, 2021
ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಸರಿಯಾಗಿ 2ವರ್ಷಗಳಾದವು. 2019ರ ಚುನಾವಣೆಯಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ 30 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ನಂತರ ಕಾಂಗ್ರೆಸ್ ಮತ್ತು ಲಾಲೂ ಪ್ರಸಾದ್ ಯಾದವ್ರ ಆರ್ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಎಂಎಂ ಸರ್ಕಾರ ರಚನೆ ಮಾಡಿದೆ. ಇನ್ನು ಜಾರ್ಖಂಡ್ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 98.48 ರೂಪಾಯಿ ಇತ್ತು. ಇದೀಗ 25 ರೂಪಾಯಿ ಕಡಿತಗೊಳ್ಳುವ ಮೂಲಕ ಪ್ರತಿ ಲೀಟರ್ಗೆ 73 ರೂ.ಆಗಲಿದೆ.
ಇದನ್ನೂ ಓದಿ: ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಚಿತ್ರದಿಂದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಬಿಗ್ ಗಿಫ್ಟ್