AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಬೆಂಗಳೂರು ಹಾಗೂ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ಇಲ್ಲಿದೆ ವಿವರ

Petrol Diesel Price Today, 07-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Today: ಬೆಂಗಳೂರು ಹಾಗೂ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 07, 2022 | 10:37 AM

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಈ ಮಧ್ಯೆ, ಇಂದು (ಏಪ್ರಿಲ್ 7, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ 17 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.  ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:02 am, Thu, 7 April 22

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?