AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಇಳಿಕೆ ಕಂಡ ಡೀಸೆಲ್​ ದರ, ಪೆಟ್ರೋಲ್​ ಬೆಲೆಯಲ್ಲಿ ಹೆಚ್ಚಳ! ದರ ವಿವರ ಮಾಹಿತಿ ಇಲ್ಲಿದೆ

Petrol Diesel Rate Today: ಇಂದು ಪೆಟ್ರೋಲ್​ ದರ ಏರಿಕೆ ಕಂಡಿದೆ. ಆದರೆ ಡೀಸೆಲ್​ ದರದಲ್ಲಿ ಕೊಂಚ ಇಳಿಕೆ ಆಗಿದೆ. ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

Petrol Price Today: ಇಂದು ಇಳಿಕೆ ಕಂಡ ಡೀಸೆಲ್​ ದರ, ಪೆಟ್ರೋಲ್​ ಬೆಲೆಯಲ್ಲಿ ಹೆಚ್ಚಳ! ದರ ವಿವರ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 12, 2021 | 9:19 AM

Share

Petrol Diesel Price Today | ದೆಹಲಿ: ನಿನ್ನೆ ಭಾನುವಾರ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಒಂದು ವಿರಾಮದ ಬಳಿಕ ಮತ್ತೆ ಇಂದು ( ಜುಲೈ 12, ಸೋಮವಾರ) ಪೆಟ್ರೋಲ್​ ದರ(Petrol Rate) ಹೆಚ್ಚಳವಾಗಿದೆ. ಆದರೆ ಡೀಸೆಲ್​ ದರ(Diesel Rate) ಕೊಂಚ ಇಳಿಕೆಯತ್ತ ಮುಖ ಮಾಡಿದೆ. ಲೀಟರ್ ಪೆಟ್ರೋಲ್​ ದರದಲ್ಲಿ 28-30 ಪೈಸೆ ಹೆಚ್ಚಳ ಮಾಡಲಾಗಿದ್ದು, ಲೀಟರ್​ ಡೀಸೆಲ್​ ದರದಲ್ಲಿ 14-16 ಪೈಸೆ ಕಡಿಮೆ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 101.91 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 89.72 ರೂಪಾಯಿಗೆ ಇಳಿಕೆಯಾಗಿದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 107.20 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 97.29 ರೂಪಾಯಿಗೆ ಇಳಿಕೆಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 101.35 ರೂಪಾಯಿಗೆ ಏರಿಕೆಯಾಗಿದ್ದರೆ, ಲೀಟರ್​ ಡೀಸೆಲ್​ ದರ 92.81 ರೂಪಾಯಿಗೆ ಇಳಿಕೆ ಆಗಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 101.91 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 94.24 ರೂಪಾಯಿಗೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.58 ರೂಪಾಯಿ ಆಗಿದೆ. ನಿನ್ನೆಯ ದರಕ್ಕಿಂತ 29 ಪೈಸೆ ಹೆಚ್ಚಳ ಮಾಡಲಾಗಿದೆ. ಲೀಟರ್ ಡೀಸೆಲ್​ ದರದಲ್ಲಿ 17 ಪೈಸೆ ಇಳಿಕೆ ಕಂಡು ಬಂದಿದ್ದು, 95.09 ರೂಪಾಯಿಗೆ ಇಳಿಕೆಯಾಗಿದೆ.

ಭೋಪಾಲ್​ನಲ್ಲಿ 100ರ ಗಡಿ ದಾಟಿದ ಪೆಟ್ರೋಲ್​ ದರ ಹಾಗೆಯೇ ಉನ್ನುಗ್ಗುತ್ತಿದೆ. ಹೈದರಾಬಾದ್​, ಮುಂಬೈ, ಬೆಂಗಳೂರಿನಲ್ಲೂ ಸಹ ಪೆಟ್ರೋಲ್​ ದರ ಗರಿಷ್ಟ ಮಟ್ಟದಲ್ಲಿದೆ. ದೇಶದಲ್ಲಿ ರಾಜಸ್ಥಾನ ಪೆಟ್ರೋಲ್​, ಡೀಸೆಲ್​ ದರದ ಮೇಲೆ ಅತಿ ಹೆಚ್ಚು ವ್ಯಾಟ್​ ವಿಧಿಸುತ್ತಿದೆ. ನಂತರ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​