Petrol Diesel Price Today|ದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ, ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಬೇಕಾಗಿದೆ. ಆ ಪ್ರಕಾರ ಇಂದು (ಶನಿವಾರ, 17 ಜುಲೈ 2021) ತೈಲ ಕಂಪನಿಗಳು ಮತ್ತೊಮ್ಮೆ ಪೆಟ್ರೋಲ್ ಬೆಲೆಯನ್ನು(Petrol Rate) ಹೆಚ್ಚಿಸಿವೆ. ಆದರೆ ಡೀಸೆಲ್ ಬೆಲೆ (Diesel Rate) ಇಂದು ಸ್ಥಿರವಾಗಿದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು ನಾಲ್ಕು ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 30 ಪೈಸೆ ಹೆಚ್ಚಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.84 ರೂಪಾಯಿ ಆಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 97.45 ರೂಪಾಯಿಯಾಗಿದೆ.
ಇಲ್ಲಿಯವರೆಗೆ ಜುಲೈನಲ್ಲಿ ಪೆಟ್ರೋಲ್ ಬೆಲೆಯನ್ನು 9 ಪಟ್ಟು ಹೆಚ್ಚಿಸಲಾಗಿದೆ. ಆದರೆ, ಡೀಸೆಲ್ 5 ಪಟ್ಟು ಹೆಚ್ಚು ದುಬಾರಿಯಾಗಿದೆ ಮತ್ತು ಒಮ್ಮೆ ಬೆಲೆ ಕಡಿಮೆ ಕೂಡ ಆಗಿತ್ತು. ಜೂನ್ ಮತ್ತು ಮೇ ತಿಂಗಳಲ್ಲಿ ಪೆಟ್ರೋಲ್ ಬೆಲೆಯನ್ನು 16 ಪಟ್ಟು ಮತ್ತು ಡೀಸೆಲ್ ಬೆಲೆಯನ್ನು16 ಪಟ್ಟು ಹೆಚ್ಚಿಸಲಾಗಿದೆ. ಮೇ 4 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಹೆಚ್ಚಳದ ಅವಧಿ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 11.44 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 09.14 ರೂಪಾಯಿ ಏರಿಕೆ ಕಂಡಿದೆ.
ದುಬಾರಿ ಪೆಟ್ರೋಲ್ ಮತ್ತು ಡೀಸೆಲ್
ದೇಶಾದ್ಯಂತ ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ರಾಜಸ್ಥಾನದ ಗಂಗನಗರ ಮತ್ತು ಮಧ್ಯಪ್ರದೇಶದ ಅನುಪ್ಪೂರ್ನಲ್ಲಿ ಪತ್ತೆಯಾಗಿದೆ. ಇಂದು ಗಂಗನಗರದಲ್ಲಿ ಪೆಟ್ರೋಲ್ ಬೆಲೆ 113.21 ರೂಪಾಯಿ ಮತ್ತು ಡೀಸೆಲ್ 103.15 ರೂಪಾಯಿ ಆಗಿದೆ. ಅದೇ ರೀತಿ ಅನುಪ್ಪೂರ್ನಲ್ಲಿ ಇಂದು ಪೆಟ್ರೋಲ್ ಬೆಲೆ 112.78 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 101.15 ರೂಪಾಯಿ ಆಗಿದೆ.
ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ಮುಂಬೈನಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 107.83 ರೂಪಾಯಿ ಆಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 97.45 ರೂಪಾಯಿ ಆಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 102.08 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 93.02 ರೂಪಾಯಿ ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 102.49 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.39 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 105.25 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 95.26 ರೂಪಾಯಿ ಆಗಿದೆ.
ಪೆಟ್ರೋಲ್ ಬೆಲೆ 100 ರ ಗಡಿ ದಾಟಿದ ರಾಜ್ಯಗಳು
ಇಲ್ಲಿಯವರೆಗೆ, 17 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಲಡಾಕ್, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ, ಪುದುಚೇರಿ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100 ರೂಪಾಯಿ ಆಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html