Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ದೆಹಲಿಯಲ್ಲಿ ಪೆಟ್ರೋಲ್ ದರ ಶತಕ ಬಾರಿಸಲು ಪೈಸೆಗಳಷ್ಟೇ ಬಾಕಿ!

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 102.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.72 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್ ದರ 97.40 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಇಂದು ಸಹ ಏರಿಕೆಯಾದ ಇಂಧನ ದರ; ದೆಹಲಿಯಲ್ಲಿ ಪೆಟ್ರೋಲ್ ದರ ಶತಕ ಬಾರಿಸಲು ಪೈಸೆಗಳಷ್ಟೇ ಬಾಕಿ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jul 04, 2021 | 9:12 AM

Petrol Diesel Price Today| ದೆಹಲಿ: ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ಕಂಡಿದೆ. ಮೇ 4ನೇ ತಾರೀಕಿನಿಂದ ಏರುತ್ತಿರುವ ಇಂಧನ ದರ ಇಲ್ಲಿಯವರೆಗೂ ಕೂಡ ಹೆಚ್ಚಳವಾಗುತ್ತಲೇ ಇದೆ. ಇಂದು (ಜುಲೈ 4, ಭಾನುವಾರ) ಪೆಟ್ರೋಲ್​, ಡೀಸೆಲ್​ ದರ ಮತ್ತೆ ಏರಿಕೆ ಕಂಡಿರುವುದು ಗ್ರಾಕರಿಗೆ ಇನ್ನಷ್ಟು ಬೇಸರ ಹೆಚ್ಚಿಸಿದೆ. ವಾಹನ ಸವಾರರ ಒಂದೇ ಒಂದು ಪ್ರಶ್ನೆ.. ಪೆಟ್ರೋಲ್​, ಡೀಸೆಲ್​ ದರ ಯಾವಾಗ ಇಳಿಕೆಯತ್ತ ಸಾಗುವುದು ಎಂಬುದು. ಆದರೆ ಸದ್ಯ ಪೆಟ್ರೋಲ್​, ಡೀಸೆಲ್​ ದರ ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 17 ಬಾರಿ ಪೆಟ್ರೋಲ್​​ ದರವನ್ನು ಹೆಚ್ಚಿಸಲಾಗಿದೆ.

ಬೆಲೆ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 99.51 ರೂಪಾಯಿಗೆ ಏರಿಕೆಯಾಗಿದೆ. ಇದೇ ರೀತಿ ಮುಂದುವರೆದರೆ ಶತಕ ಬಾರಿಸುವುದು ಗ್ಯಾರೆಂಟಿ. ಹಾಗೆಯೇ ಲೀಟರ್​ ಡೀಸೆಲ್​ ದರ 89.38 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್​ ದರ ಮತ್ತೆ ಏರಿಕೆ ಕಂಡಿದೆ. ಲೀಟರ್​ ಪೆಟ್ರೋಲ್​ ದರ 105.58 ರೂಪಾಯಿಗೆ ಏರಿಕೆಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 9.45 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್​ ಪೆಟ್ರೋಲ್​ ದರ 92.27 ರೂಪಾಯಿಗೆ ಏರಿಕೆಯಾಗಿದೆ. ಚೆ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 100.44 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೆ ಚೆನ್ನೈ ಕೂಡಾ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 102.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.72 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್ ದರ 97.40 ರೂಪಾಯಿಗೆ ಏರಿಕೆಯಾಗಿದೆ. ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 101.62 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.76 ರೂಪಾಯಿಗೆ ಏರಿಕೆಯಾಗಿದೆ.

ದೇಶಾದ್ಯಂತ 11 ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್​ ದರ ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಅವುಗಳು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಅಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ. ಒಟ್ಟು 34 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ