Petrol Diesel Price Today| ದೆಹಲಿ: ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ. ಮೇ 4ನೇ ತಾರೀಕಿನಿಂದ ಏರುತ್ತಿರುವ ಇಂಧನ ದರ ಇಲ್ಲಿಯವರೆಗೂ ಕೂಡ ಹೆಚ್ಚಳವಾಗುತ್ತಲೇ ಇದೆ. ಇಂದು (ಜುಲೈ 4, ಭಾನುವಾರ) ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ ಕಂಡಿರುವುದು ಗ್ರಾಕರಿಗೆ ಇನ್ನಷ್ಟು ಬೇಸರ ಹೆಚ್ಚಿಸಿದೆ. ವಾಹನ ಸವಾರರ ಒಂದೇ ಒಂದು ಪ್ರಶ್ನೆ.. ಪೆಟ್ರೋಲ್, ಡೀಸೆಲ್ ದರ ಯಾವಾಗ ಇಳಿಕೆಯತ್ತ ಸಾಗುವುದು ಎಂಬುದು. ಆದರೆ ಸದ್ಯ ಪೆಟ್ರೋಲ್, ಡೀಸೆಲ್ ದರ ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜೂನ್ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 17 ಬಾರಿ ಪೆಟ್ರೋಲ್ ದರವನ್ನು ಹೆಚ್ಚಿಸಲಾಗಿದೆ.
ಬೆಲೆ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 99.51 ರೂಪಾಯಿಗೆ ಏರಿಕೆಯಾಗಿದೆ. ಇದೇ ರೀತಿ ಮುಂದುವರೆದರೆ ಶತಕ ಬಾರಿಸುವುದು ಗ್ಯಾರೆಂಟಿ. ಹಾಗೆಯೇ ಲೀಟರ್ ಡೀಸೆಲ್ ದರ 89.38 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್ ದರ ಮತ್ತೆ ಏರಿಕೆ ಕಂಡಿದೆ. ಲೀಟರ್ ಪೆಟ್ರೋಲ್ ದರ 105.58 ರೂಪಾಯಿಗೆ ಏರಿಕೆಯಾಗಿದೆ.
ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 9.45 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್ ಪೆಟ್ರೋಲ್ ದರ 92.27 ರೂಪಾಯಿಗೆ ಏರಿಕೆಯಾಗಿದೆ. ಚೆ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.44 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೆ ಚೆನ್ನೈ ಕೂಡಾ ಶತಕ ಬಾರಿಸಿ ಮುನ್ನುಗ್ಗುತ್ತಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.72 ರೂಪಾಯಿ ಆಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 97.40 ರೂಪಾಯಿಗೆ ಏರಿಕೆಯಾಗಿದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.76 ರೂಪಾಯಿಗೆ ಏರಿಕೆಯಾಗಿದೆ.
ದೇಶಾದ್ಯಂತ 11 ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್ ದರ ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಅವುಗಳು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಅಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್ ಮತ್ತು ಬಿಹಾರ. ಒಟ್ಟು 34 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html