Petrol Price Today: ಇಂದು ಸಹ ಏರಿಕೆ ಕಂಡ ಇಂಧನ ಬೆಲೆ; ದೆಹಲಿ, ಕೋಲ್ಕತ್ತಾದಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ!

Petrol Diesel Rate Today: ಇಂದು ಮತ್ತೆ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಕಂಡಿದೆ. ಆ ಮೂಲಕ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ವಿವಿಧ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ ಪರಿಶೀಲಿಸಿ.

Petrol Price Today: ಇಂದು ಸಹ ಏರಿಕೆ ಕಂಡ ಇಂಧನ ಬೆಲೆ; ದೆಹಲಿ, ಕೋಲ್ಕತ್ತಾದಲ್ಲಿ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jul 07, 2021 | 9:09 AM

Petrol Diesel Price Today| ದೆಹಲಿ: ಇಂದು ತೈಲ ಮಾರುಕಟ್ಟೆ ಕಂಪನಿಗಳು ಮತ್ತೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಹೆಚ್ಚಿಸಿವೆ. ಈ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇಂದು ( ಬುಧವಾರ, ಜುಲೈ 7) ಬೆಲೆ ಹೆಚ್ಚಳದ ಬಳಿಕ ಲೀಟರ್​ ಪೆಟ್ರೋಲ್​ ದರ 100.21 ರೂಪಾಯಿ ಆಗಿದೆ. ಇಂದು 17 ಪೈಸೆ ಹೆಚ್ಚಳದ ಬಳಿಕ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 89.53 ರೂಪಾಯಿ ನಿಗದಿಯಾಗಿದೆ.

ಮೇ 4ರಿಂದ ಇಂಧನ ದರ ಏರಿಕೆಯತ್ತ ಸಾಗುತ್ತಿದ್ದು ಇಲ್ಲಿರವರೆಗೆ ಒಟ್ಟು 36 ಬಾರಿ ಹೆಚ್ಚಳ ಮಾಡಲಾಗಿದೆ. ಜುಲೈ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 4 ಬಾರಿ ಹೆಚ್ಚಳ ಮಾಡಲಾಗಿದೆ. ದರ ಏರಿಕೆ ಕಾಣಲು ಆರಂಭವಾದಾಗಿನಿಂದ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 9.52 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರದಲ್ಲಿ 9.65ರೂಪಾಯಿ ಏರಿಕೆ ಆಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿ ಮುಂಬೈ ಗರಿಷ್ಟ ಮಟ್ಟದಲ್ಲಿದೆ. ಲೀಟರ್​ ಪೆಟ್ರೋಲ್​ ದರ 106.25 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 97.09 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್ ದರ 101.06 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 94.06 ರೂಪಾಯಿಗೆ ಏರಿಕೆ ಆಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 100.23 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.50 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.56 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.89 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 103.78 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 97.40 ರೂಪಾಯಿ ಆಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್