Petrol Price Today: ಇಂದು ಸಹ ಇಂಧನ ದರ ಹೆಚ್ಚಳ; ಪ್ರಮುಖ ಮಹಾನಗರಗಳಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ ಪೆಟ್ರೋಲ್​ ದರ!

Petrol Diesel Rate Today: ಸದ್ಯ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಳಿಕೆ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜುಲೈ ತಿಂಗಳಿನಲ್ಲಿ ಒಟ್ಟು 6 ಬಾರಿ ಇಂಧನ ದರ ಹೆಚ್ಚಳವಾಗಿದೆ. ಮೇ 4 ರಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 38 ಬಾರಿ ಇಂಧನ ದರ ಹೆಚ್ಚಳವಾಗಿದೆ.

Petrol Price Today: ಇಂದು ಸಹ ಇಂಧನ ದರ ಹೆಚ್ಚಳ; ಪ್ರಮುಖ ಮಹಾನಗರಗಳಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ ಪೆಟ್ರೋಲ್​ ದರ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Jul 08, 2021 | 9:05 AM

Petrol Diesel Price Today| ದೆಹಲಿ: ನಿನ್ನೆ ದರ ಏರಿಕೆಯ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳು ಲೀಟರ್ ಪೆಟ್ರೋಲ್ ದರದಲ್ಲಿ ಶತಕ ಬಾರಿಸಿತ್ತು. ಆ ಬಳಿಕ ಇಂದು (ಜುಲೈ 8, ಗುರವಾರ) ಮತ್ತೆ ಇಂಧನ ದರ ಏರಿಕೆ ಕಂಡಿದ್ದು, 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ಮೆಟ್ರೋ ನಗರಗಳೆಲ್ಲವೂ ಸಹ 100ರ ಗಡಿ ದಾಟಿ ಇತಿಹಾಸ ಸೃಷ್ಟಿಸಿದೆ. ವಾಹನ ಸವಾರರು ಇಂಧನ ದರ ಏರುತ್ತಿರುವುದನ್ನು ಕಂಡು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ ಏರಿಕೆ ಖಂಡಿಸಿ ಪ್ರತಿಭಟನೆಗಳೂ ನಡೆಯುತ್ತಿವೆ.

ಸದ್ಯ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಳಿಕೆ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜುಲೈ ತಿಂಗಳಿನಲ್ಲಿ ಒಟ್ಟು 6 ಬಾರಿ ಇಂಧನ ದರ ಹೆಚ್ಚಳವಾಗಿದೆ. ಮೇ 4 ರಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಏರಿಕೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 38 ಬಾರಿ ಇಂಧನ ದರ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರದಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಲೀಟರ್ ಡೀಸೆಲ್​ ದರದಲ್ಲಿ 9 ಪೈಸೆ ಏರಿಕೆಯಾಗಿದೆ.

ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 105.56 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 89.62 ರೂಪಾಯಿ ಆಗಿದೆ. ಅದೇ ರೀತಿ ಮೆಟ್ರೋ ಸಿಟಿಗಳಲ್ಲೇ ಅತಿ ಗರಿಷ್ಟ ಮಟ್ಟದಲ್ಲಿರುವ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 106.59 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.18 ರೂಪಾಯಿ ಆಗಿದೆ.

ನಿನ್ನೆ ದರ ಏರಿಕೆಯ ಬಳಿಕ ದೆಹಲಿ ಮತ್ತು ಕೋಲ್ಕತ್ತಾ ಲೀಟರ್​ ಪೆಟ್ರೋಲ್​ ದರದಲ್ಲಿ ಶತಕ ಬಾರಿಸಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 100.62 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.65 ರೂಪಾಯಿ ಆಗಿದೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್ ದರ 101.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.15 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.99 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 104.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.68 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 102.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.14 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.88 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.40 ರೂಪಾಯಿಗೆ ಏರಿಕೆಯಾಗಿದೆ. ಶ್ರೀನಗರದಲ್ಲಿ ಲೀಟರ್​ ಪೆಟ್ರೋಲ್​ ದರ 103.44 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.24 ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್