Petrol Diesel Price Today| ದೆಹಲಿ: ನಿನ್ನೆ ದರ ಏರಿಕೆಯ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳು ಲೀಟರ್ ಪೆಟ್ರೋಲ್ ದರದಲ್ಲಿ ಶತಕ ಬಾರಿಸಿತ್ತು. ಆ ಬಳಿಕ ಇಂದು (ಜುಲೈ 8, ಗುರವಾರ) ಮತ್ತೆ ಇಂಧನ ದರ ಏರಿಕೆ ಕಂಡಿದ್ದು, 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ಮೆಟ್ರೋ ನಗರಗಳೆಲ್ಲವೂ ಸಹ 100ರ ಗಡಿ ದಾಟಿ ಇತಿಹಾಸ ಸೃಷ್ಟಿಸಿದೆ. ವಾಹನ ಸವಾರರು ಇಂಧನ ದರ ಏರುತ್ತಿರುವುದನ್ನು ಕಂಡು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ ಏರಿಕೆ ಖಂಡಿಸಿ ಪ್ರತಿಭಟನೆಗಳೂ ನಡೆಯುತ್ತಿವೆ.
ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಜುಲೈ ತಿಂಗಳಿನಲ್ಲಿ ಒಟ್ಟು 6 ಬಾರಿ ಇಂಧನ ದರ ಹೆಚ್ಚಳವಾಗಿದೆ. ಮೇ 4 ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 38 ಬಾರಿ ಇಂಧನ ದರ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರದಲ್ಲಿ 9 ಪೈಸೆ ಏರಿಕೆಯಾಗಿದೆ.
ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.56 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ದರ 89.62 ರೂಪಾಯಿ ಆಗಿದೆ. ಅದೇ ರೀತಿ ಮೆಟ್ರೋ ಸಿಟಿಗಳಲ್ಲೇ ಅತಿ ಗರಿಷ್ಟ ಮಟ್ಟದಲ್ಲಿರುವ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 106.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.18 ರೂಪಾಯಿ ಆಗಿದೆ.
ನಿನ್ನೆ ದರ ಏರಿಕೆಯ ಬಳಿಕ ದೆಹಲಿ ಮತ್ತು ಕೋಲ್ಕತ್ತಾ ಲೀಟರ್ ಪೆಟ್ರೋಲ್ ದರದಲ್ಲಿ ಶತಕ ಬಾರಿಸಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 100.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.65 ರೂಪಾಯಿ ಆಗಿದೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.15 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.99 ರೂಪಾಯಿ ಆಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 104.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.68 ರೂಪಾಯಿಗೆ ಏರಿಕೆ ಮಾಡಲಾಗಿದೆ.
ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 102.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.14 ರೂಪಾಯಿ ಇದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 108.88 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.40 ರೂಪಾಯಿಗೆ ಏರಿಕೆಯಾಗಿದೆ. ಶ್ರೀನಗರದಲ್ಲಿ ಲೀಟರ್ ಪೆಟ್ರೋಲ್ ದರ 103.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.24 ರೂಪಾಯಿಗೆ ಏರಿಕೆಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html