AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿದ ಇಂಧನ ದರ; ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​​ ದರ ಶತಕ ಬಾರಿಸಲು 10 ಪೈಸೆಗಳಷ್ಟೇ ಬಾಕಿ!

Petrol Diesel Rate Today: ದೆಹಲಿ ಕೂಡಾ ಶತಕ ಬಾರಿಸಲು ಗಡಿಯಂಚಿನಲ್ಲಿಯೇ ಇದೆ. ಲೀಟರ್ ಪೆಟ್ರೊಲ್​ ದರ 99.90 ರೂಪಾಯಿ ನಿಗದಿಯಾಗಿದೆ. ಲೀಟರ್​ ಡೀಸೆಲ್​ ದರ 89.40 ರೂಪಾಯಿ ಇದೆ.

Petrol Price Today: ಇಂದು ಸಹ ಏರಿದ ಇಂಧನ ದರ; ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​​ ದರ ಶತಕ ಬಾರಿಸಲು 10 ಪೈಸೆಗಳಷ್ಟೇ ಬಾಕಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 05, 2021 | 9:07 AM

Share

Petrol Diesel Price Today| ದೆಹಲಿ: ಇಂದು (ಜುಲೈ 5, ಸೋಮವಾರ) ಪೆಟ್ರೋಲ್​​ ಬೆಲೆ ಏರಿಕೆ ಕಂಡಿದೆ. ಲೀಟರ್​ ಪೆಟ್ರೋಲ್​ ದರದಲ್ಲಿ 31 ರಿಂದ 39 ಪೈಸೆ ಏರಿಕೆ ಆಗಿದೆ. ಆದರೆ ಡೀಸೆಲ್​ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆ ಕೂಡಾ ಇಂಧನ ದರ ಏರಿಕೆ ಕಂಡಿತ್ತು. ಆ ಬಳಿಕ ಇಂದು ಸಹ ಪೆಟ್ರೋಲ್​ ದರ ಹೆಚ್ಚಳ ಕಾಣುತ್ತಿರುವುದು ಗ್ರಾಹಕರಿಗೆ ಬೇಸರದ ವಿಚಾರ. ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ, ಅದೆಷ್ಟೋ ರಾಜ್ಯಗಳಲ್ಲಿ 100ರ ಗಡಿ ದಾಟಿ ಮುನ್ನುಗ್ಗಿದೆ, ಆದರೂ ಸಹ ಮತ್ತೆ ಇಂಧನ ದರ ಹೆಚ್ಚಳವಾಗುತ್ತಲೇ ಇದೆ. ಪೆಟ್ರೋಲ್, ಡೀಸೆಲ್​ ದರ ಇಳಿಕೆಯ ಹಾದಿ ಹಿಡಿಯುವುದು ಯಾವಾಗ? ಎಂಬುದೊಂದೇ ವಾಹನ ಸವಾರರ ಪ್ರಶ್ನೆ.

ಪಂಚ ರಾಜ್ಯಗಳ ಚುನಾವಣೆಯ ಬಳಿಕ ಮೇ ತಿಂಗಳಿನಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಹೆಚ್ಚಳ ಮಾಡುಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 35 ಬಾರಿ ತೈಲ ದರ ಏರಿಕೆ ಆಗಿದೆ. ದೆಹಲಿ ಕೂಡಾ ಶತಕ ಬಾರಿಸಲು ಗಡಿಯಂಚಿನಲ್ಲಿಯೇ ಇದೆ. ಲೀಟರ್ ಪೆಟ್ರೊಲ್​ ದರ 99.90 ರೂಪಾಯಿ ನಿಗದಿಯಾಗಿದೆ. ಲೀಟರ್​ ಡೀಸೆಲ್​ ದರ 89.40 ರೂಪಾಯಿ ಇದೆ.

ದೇಶಾದ್ಯಂತ 11 ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್​ ದರ ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಅವುಗಳು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ. ಒಟ್ಟು 35 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.88 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್​ ದರ 92.31 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 105.95 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 96.95 ರೂಪಾಯಿ ಇದೆ.

ಇನ್ನು, ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 100.78 ರೂಪಾಯಿಗೆ ಹೆಚ್ಚಳವಾಗಿದೆ. ಲೀಟರ್​ ಡೀಸೆಲ್​ ದರ 93.94 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 94.72 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:06 am, Mon, 5 July 21

Follow Us
TV9 Web
TV9 Web

TV9 Kannada

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!