AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಪೆಟ್ರೋಲ್ ದರ ಮತ್ತೂ ಹೆಚ್ಚಬಹುದು, ಇದು ನನ್ನನ್ನು ಧರ್ಮಸಂಕಟಕ್ಕೆ ನೂಕಿದೆ: ನಿರ್ಮಲಾ ಸೀತಾರಾಮನ್​

Petrol Rate: ಕೇಂದ್ರ ಬಜೆಟ್​ ಕುರಿತು ಚರ್ಚೆ ಮಾಡಲು ಚೆನ್ನೈನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಭಾಗಿಯಾಗಿದ್ದರು. ಕಾರ್ಯಕ್ರಮ ಪೂರ್ಣಗೊಂಡ ನಂತರದಲ್ಲಿ ಮಾಧ್ಯಮದ ಜತೆ ಮಾತನಾಡಿದರು.

Petrol Price: ಪೆಟ್ರೋಲ್ ದರ ಮತ್ತೂ ಹೆಚ್ಚಬಹುದು, ಇದು ನನ್ನನ್ನು ಧರ್ಮಸಂಕಟಕ್ಕೆ ನೂಕಿದೆ: ನಿರ್ಮಲಾ ಸೀತಾರಾಮನ್​
ನಿರ್ಮಲಾ ಸೀತಾರಾಮನ್​
ರಾಜೇಶ್ ದುಗ್ಗುಮನೆ
|

Updated on: Feb 20, 2021 | 10:06 PM

Share

ನವದೆಹಲಿ: ಪೆಟ್ರೋಲ್​ ಬೆಲೆ ಹಲವು ರಾಜ್ಯಗಳಲ್ಲಿ ಈಗಾಗಲೇ 100 ರೂಪಾಯಿಯ ಗಡಿ ದಾಟಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್​ ದರ 100 ರೂಪಾಯಿ ಗಡಿ ಸಮೀಪಿಸುತ್ತಿದೆ. ಇದರಿಂದ ದಿನ ನಿತ್ಯ ಬಳಕೆ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಈ ಬಗ್ಗೆ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದು, ಈ ಪರಿಸ್ಥಿತಿ ನನ್ನನ್ನು ಧರ್ಮ ಸಂಕಟಕ್ಕೆ ನೂಕಿದೆ ಎಂದು ಹೇಳಿದ್ದಾರೆ. ಕೇಂದ್ರ ಬಜೆಟ್​ ಕುರಿತು ಚರ್ಚೆ ಮಾಡಲು ಚೆನ್ನೈನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಭಾಗಿಯಾಗಿದ್ದರು. ಕಾರ್ಯಕ್ರಮ ಪೂರ್ಣಗೊಂಡ ನಂತರದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಪೆಟ್ರೋಲ್​ ದರ ಏರುತ್ತಿರುವುದು ತುಂಬಾ ದುಃಖಕರ ವಿಷಯ. ಬೆಲೆ ಕಡಿಮೆ ಮಾಡುವುದನ್ನು ಹೊರತುಪಡಿಸಿ ಯಾವುದೇ ಉತ್ತರವೂ ಜನರಿಗೆ ಸಮಾಧಾನ ತರುವುದಿಲ್ಲ ಎಂದಿದ್ದಾರೆ.

ಪೆಟ್ರೋಲ್​ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಇಬ್ಬರೂ ಸೇರಿ ಮಾತುಕತೆ ನಡೆಸಬೇಕು. ತೈಲ ಉತ್ಪಾದನೆ ಮುಂದಿನ ದಿನಗಳಲ್ಲಿ ಕಡಿಮೆ ಆಗಬಹುದು ಎನ್ನುವ ಎಚ್ಚರಿಕೆಯನ್ನು ಒಪೆಕ್​  ( Organization Of The Petroleum Exporting Countries) ರಾಷ್ಟ್ರಗಳು ನೀಡಿವೆ. ಇದರಿಂದ ತೈಲದರ ಮತ್ತೂ ಜಾಸ್ತಿ ಆಗಬಹುದು ಎಂದು ನಿರ್ಮಲಾ ಆತಂಕ ಹೊರ ಹಾಕಿದರು.

ತೈಲ ಕಂಪೆನಿಗಳು ಬೆಲೆಗಳನ್ನು ಕಡಿತಗೊಳಿಸಬೇಕೇ ಅಥವಾ ಬೇಡವೇ ಎಂದು ನಿರ್ಧರಿಸುತ್ತವೆ. ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಕಂಪನಿಗಳು, ಅದನ್ನು ಪರಿಷ್ಕರಿಸಿ, ವಿತರಿಸುವ ಕಾರ್ಯವನ್ನು ಅವೇ ಮಾಡುತ್ತವೆ. ಇದರ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿಲ್ಲ ಎಂದು ಹೇಳುವ ಮೂಲಕ ಪೆಟ್ರೋಲ್​ ದರ ಏರಿಕೆಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎನ್ನುವುದನ್ನು ಒತ್ತಿ ಹೇಳಿದರು.

ಪೆಟ್ರೋಲ್​ಅನ್ನು ಜಿಎಸ್​ಟಿ ಅಡಿಯಲ್ಲಿ ತರುವ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಆದರೆ, ಪೆಟ್ರೋಲ್​ಅನ್ನು ಈವರೆಗೆ ಜಿಎಸ್​ಟಿ ಅಡಿಯಲ್ಲಿ ತಂದಿಲ್ಲ. ಈ ಬಗ್ಗೆ ಮಾತನಾಡಿರುವ ಅವರು, ಪೆಟ್ರೋಲ್​ ಅನ್ನು ಜಿಎಸ್​​ಟಿ ಅಡಿ ತರಲು ಜಿಎಸ್​ಟಿ ಕೌನ್ಸಿಲ್​ನಲ್ಲಿ ಸಮಗ್ರ ಚರ್ಚೆ ಮತ್ತು ರಾಜ್ಯಗಳ ನಡುವೆ ಸಮಾಲೋಚನೆ ನಡೆಸುವ ಅಗತ್ಯವಿದೆ. ಇದಕ್ಕಾಗಿ, ಸಂಸತ್ತಿನಲ್ಲಿ ಯಾವುದೇ ತಿದ್ದುಪಡಿಗಳನ್ನು ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:  ಪೆಟ್ರೋಲ್​, ಡೀಸೆಲ್​ ವಾಹನ ಬದಲು ಎಲೆಕ್ಟ್ರಿಕ್​ ವಾಹನ ಬಳಸಿದರೆ ಭಾರಿ ಹಣ ಉಳಿತಾಯ ಆಗುತ್ತೆ: ನಿತಿನ್​ ಗಡ್ಕರಿ

Petrol Diesel Price | ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಯ್ತು… ಈಗ ಹಣ್ಣು-ತರಕಾರಿ ಬೆಲೆಯೂ ಏರುತ್ತಿದೆ!

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ