ಬೆಂಗಳೂರು: ಇಂದು ಗುರವಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಮನಿಸಿದಾಗ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 90.56 ರೂಪಾಯಿಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ಅನ್ನು 80.87 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಹಾಗೆಯೇ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.98 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್ ಡೀಸೆಲ್ 87.96 ರೂಪಾಯಿಗೆ ಮಾರಾಟವಾಗುತ್ತಿದೆ.
ಇನ್ನು, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 92.58 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ಅನ್ನು 85.88 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.75 ರೂಪಾಯಿ ಇದೆ.
ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.20 ರೂಪಾಯಿ ಇದೆ. ಹಾಗೆಯೇ ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.85 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 81.27 ರೂಪಾಯಿಗೆ ಮಾರಾಟವಾಗುತ್ತಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.91 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್ ಡೀಸೆಲ್ ದರ 81.33 ರೂಪಾಯಿಗೆ ಮಾರಾಟವಾಗುತ್ತಿದೆ.
ಫೆಬ್ರವರಿ ತಿಂಗಳಿನಲ್ಲಿ ಪೆಟ್ರೀಲ್, ಡೀಸೆಲ್ ದರ ಏರಿಕೆಯಿಂದಾಗಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ಗಡೆ ದಾಟಿತ್ತು. ಗರಿಷ್ಠ ಮಟ್ಟದಲ್ಲಿ ಇಂಧನ ದರ ಏರಿರುವುದನ್ನು ಗಮನಿಸುತ್ತಿದ್ದ ಗ್ರಾಹಕರ ಕೆಂಗಣ್ಣಿಗೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಸರ್ಕಾರ ಸುಂಕವನ್ನು ಹೆಚ್ಚಿಸಿ ಪೆಟ್ರೋಲ್ ಪ್ರತಿ ಲೀಟರ್ಗೆ 21.58 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 19.18 ರೂಪಾಯಿಗೆ ಏರಿಕೆಯಾಗಿತ್ತು.
ಸುಯೆಜ್ ಕಾಲುವೆಯಲ್ಲಿ ಸರಕು ಸಾಗಣೆಯು ಮತ್ತೆ ಪ್ರಾರಂಭವಾಗಿದ್ದು, ಇದರ ನಂತರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು 93.59 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ಅನ್ನು 85.75 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ.
ವಿವಿಧ ನಗರದ ಪೆಟ್ರೋಲ್ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.htmlವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
Published On - 10:02 am, Thu, 1 April 21