Petrol Price Today: ಇಂಧನ ಕೊಳ್ಳುವವರ ಗಮನಕ್ಕೆ.. ಪೆಟ್ರೋಲ್, ಡೀಸೆಲ್ ದರ ಹೀಗಿದೆ!
Petrol Diesel Price Today in Bengaluru: ಇಂದು ಸೋಮವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಇಂಧನ ದರ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಇಂದು ಸೋಮವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮಾರ್ಚ್ 30 ನೇ ತಾರೀಕಿನಂದು ಪ್ರಮುಖ ನಗರಗಳಲ್ಲಿ ಇಂಧನ ದರ ಕುಸಿತದ ನಂತರ ಸುಮಾರು ಒಂದು ವಾರದಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. ಇಂದು ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.87 ರೂಪಾಯಿ ಇದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು ಗ್ರಾಹಕರು 93.59 ರೂಪಾಯಿ ಕೊಟ್ಟು ಹಾಗೂ ಪ್ರತಿ ಲೀಟರ್ ಡೀಸೆಲ್ಗೆ 85.75 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 96.98 ರೂಪಾಯಿ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪ್ರತಿ ದಿನವೂ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಸತತವಾಗಿ ಆರನೇ ದಿನವೂ ಸರ್ಕಾರಿ ತೈಲ ಕಂಪನಿಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಕಳೆದ ಮಂಗಳವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಕ್ರಮವಾಗಿ 22 ಪೈಸೆ ಹಾಗೂ 23 ಪೈಸೆ ಇಳಿಕೆ ಕಂಡು ಬಂದಿತ್ತು.
ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.88 ರೂಪಾಯಿ ಇದೆ. ಹಾಗೆಯೇ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು ಗ್ರಾಹಕರು 90.77 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ಅನ್ನು 83.75 ರೂಙಪಾಯಿ ಕೊಟ್ಟು ಕೊಳ್ಳುತ್ತಿದ್ದಾರೆ.
ಪುಣೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.62 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 86.27 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಪ್ರತಿ ಲೀಟರ್ 94.16 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.20 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.33 ರೂಪಾಯಿ ಇದೆ. ಹರಿಯಾಣದ ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.52 ರೂಪಾಯಿ ಇದ್ದು, ಪ್ರತಿ ಲೀಟರ್ ಡೀಸೆಲ್ ದರ 81.45 ರೂಪಾಯಿ ಇದೆ.
ಇದನ್ನೂ ಓದಿ: Petrol Price Today: ಪೆಟ್ರೋಲ್, ಡೀಸೆಲ್ ಖರೀದಿಸುವುದಾದರೆ ದರ ಹೀಗಿದೆ ಗಮನಿಸಿ!
(Petrol Price Today in Bangalore Delhi Mumbai and Chennai Diesel price on 5th April 2021)
Published On - 10:00 am, Mon, 5 April 21