Petrol Price Today: ಯುಗಾದಿ ಹಬ್ಬದ ಪ್ರಯಾಣ ಸುಖಕರವಾಗಿರಲಿ.. ಪ್ರಯಾಣಕ್ಕೂ ಮುನ್ನ ಪೆಟ್ರೋಲ್, ಡೀಸೆಲ್ ದರ ಗಮನಿಸಿ!

Petrol Price Today: ಯುಗಾದಿ ಹಬ್ಬದ ಪ್ರಯಾಣ ಸುಖಕರವಾಗಿರಲಿ.. ಪ್ರಯಾಣಕ್ಕೂ ಮುನ್ನ ಪೆಟ್ರೋಲ್, ಡೀಸೆಲ್ ದರ ಗಮನಿಸಿ!
ಸಂಗ್ರಹ ಚಿತ್ರ

Petrol Diesel Price Today in Bengaluru: ಏಪ್ರಿಲ್ 11ನೇ ತಾರೀಕಿನಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ವಿವಿಧ ನಗರದಲ್ಲಿ ಇಂಧನ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

shruti hegde

|

Apr 11, 2021 | 8:09 AM

ಬೆಂಗಳೂರು: ಇನ್ನೇನು ಯುಗಾದಿ ಹಬ್ಬ ಎದುರಿಗಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್​ ಸಂಚಾರಗೊಳ್ಳುತ್ತಿಲ್ಲ. ಹಾಗಿದ್ದಾಗ ದೂರದ ಊರಿನಲ್ಲಿದ್ದವರು ಇನ್ನಿತರ ಬಾಡಿಗೆ ವಾಹನಗಳನ್ನೋ ಅಥವಾ ತಮ್ಮ ಸ್ವಂತ ವಾಹನದಲ್ಲಿ ತಮ್ಮ ಊರಿಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿದೆ.  ಜೊತೆಗೆ ಪೆಟ್ರೋಲ್​, ಡೀಸೆಲ್ ದರ ಈ ವರ್ಷ ಏರಿಕೆಯತ್ತ ಸಾಗಿದೆ. ಏಪ್ರಿಲ್​ ತಿಂಗಳಿನಲ್ಲಿ, ಅದರಲ್ಲೂ ಹಬ್ಬ ಎದುರಿಗಿದ್ದಾಗ ಇಂಧನ ದರ ಏರಿಕೆ ಕಾಣದೇ ಸ್ಥಿರವಾಗಿಯೇ ಉಳಿದಿದೆ ಎಂಬುದು ಗ್ರಾಹಕರಿಗೆ ಖುಷಿ ಕೊಡುವ ವಿಚಾರ. ಪ್ರಯಾಣ ಕೈಗೊಳ್ಳುವ ಮುನ್ನ ಇಂಧನ ದರ ಎಷ್ಟಿದೆ ಎಂಬುದನ್ನು ಗಮನಿಸಿ.

ಸತತವಾಗಿ 11ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿಯೇ ಉಳಿದಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಮೂರು ಬಾರಿ ಕಡಿತಗೊಳಿಸಲಾಗಿದೆ. ಅದಾದ ನಂತರದಲ್ಲಿ ಪೆಟ್ರೋಲ್ ದರ 61 ಪೈಸೆ ಕಡಿತಗೊಂಡಿದೆ. ಹಾಗೆ ಡೀಸೆಲ್ ದರವನ್ನು ಪ್ರತಿ ಲೀಟರಿಗೆ 60 ಪೈಸೆ ಕಡಿತಗೊಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ದರ ಲೆಕ್ಕಾಚಾರ ಮಾಡಿದಾಗ ಪ್ರತಿ ಲೀಟರ್ ಪೆಟ್ರೋಲ್ ದರ 21.58 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 19.18 ರೂಪಾಯಿ ಕಡಿಮೆಯಾಗಿದೆ. ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿರುವುದರಿಂದ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 80.89 ರೂಪಾಯಿ ಇದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 87.96 ರೂಪಾಯಿ ಇದೆ.

ಇನ್ನು, ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.77 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಮಾರುಕಟ್ಟೆಯಲ್ಲಿ ಯಾವ ದರದಲ್ಲಿ ವಹಿವಾಟು ನಡೆಸುತ್ತಿದೆ ಎಂದು ನೋಡುವುದಾದರೆ, ಪ್ರತಿ ಲೀಟರ್ ಪೆಟ್ರೋಲ್ 92.58 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲಿಗೆ 88.91 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್ ಡೀಸೆಲ್ ದರ 81.33 ರೂಪಾಯಿಗೆ ಮಾರಾಟವಾಗುತ್ತಿದೆ.

ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಇಲ್ಲಿಯವರೆಗೆ ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಆದರೆ ಅದಕ್ಕೂ ಮೊದಲು ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

(Petrol Price Today in Delhi Mumbai Chennai and Bangalore Diesel price on 11th April 2021)

Follow us on

Related Stories

Most Read Stories

Click on your DTH Provider to Add TV9 Kannada