Petrol Price Today: ಸ್ಥಿರತೆಯಲ್ಲಿ ಇಂಧನ‌ ದರ! ಇಂದು ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್‌ ದರ ಎಷ್ಟಿದೆ?

Petrol Diesel Price Today in Bengaluru: ಇಂದು ಬಧವಾರವೂ ಇಂಧನ ದರದಲ್ಲಿಯಾವುದೇ ಬದಲಾವಣೆಗಳಿಲ್ಲ. ವಿವಿಧ ನಗರದಲ್ಲಿ ಪೆಟ್ರೋಲ್, ಡೀಸೆಲ್ ದರ ಹೇಗಿದೆ ಎಂಬುದರ ವಿವರ ಇಲ್ಲಿದೆ.

Petrol Price Today: ಸ್ಥಿರತೆಯಲ್ಲಿ ಇಂಧನ‌ ದರ! ಇಂದು ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್‌ ದರ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Apr 07, 2021 | 7:55 AM

ಬೆಂಗಳೂರು: ಪ್ರತಿ ದಿನವೂ ಇಂಧನ ದರವನ್ನು ಪರಿಷ್ಕರಿಸಲಾಗುತ್ತದೆ. ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಏರು-ಪೇರಾದಾಗ ದೇಶಿಯ ಮಾರುಕಟ್ಟೆಯಲ್ಲಿ ಇಂಧನ ದರ ಬದಲಾಗುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತದೆ. ಜೊತೆಗೆ ಇಂಧನ ದರ ಇಳಿಕೆ ಕಂಡಾಗ, ದೇಶಿಯ ಮಾರುಕಟ್ಟೆಯಲ್ಲೂ ಇಳಿಕೆ ಕಾಣುವುದು ಸಾಮಾನ್ಯ ವಿಚಾರ.

ಇಂದು ಬುಧವಾರವೂ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಏರಿಕೆಯತ್ತ ಸಾಗುತ್ತಿದ್ದಾಗ ದಿನೇ ದಿನೇ ಪೆಟ್ರೋಲ್​, ಡೀಸೆಲ್​ ದರ ಏರಿತ್ತು. ಆದರೆ ಇಳಿಕೆಯತ್ತ ಮುಖ ಮಾಡುತ್ತಿರುವಾಗ ಎರಡು ದಿನ ಮಾತ್ರ ಇಳಿಕೆ ಕಂಡಿದೆ ಎಂಬುದೊಂದೇ ಗ್ರಾಹಕರ ಪ್ರಶ್ನೆ.

ಮೆಟ್ರೋ ನಗರಗಳಾದ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 90.56 ರೂಪಾಯಿ ಇದೆ. ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 96.98 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ 87.96ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲಿಟರ್​ ಪೆಟ್ರೋಲ್​ಅನ್ನು 90.77  ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ ಹಾಗೆಯೇ ಪ್ರತಿ ಲೀಟರ್​ ಡೀಸೆಲ್​ಅನ್ನು 83.75 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ 85.88 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹಾಗೆಯೇ ಹೈದರಾಬಾದ್​ನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಆಗಿದೆ.

ನೋಯಿಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.33 ರೂಪಾಯಿ ಇದೆ. ಪಂಜಾಬ್​ ಮೊಹಾಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.45 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 83.43 ರೂಪಾಯಿ ಇದೆ. ಇನ್ನು, ಛಂಡೀಘಡ್​ದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು ಗ್ರಾಹಕರು 87.14 ರೂಪಾಯಿ ಕೊಳ್ಳುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ಅನ್ನು 80.57 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಹರಿಯಾಣ ಗುರುಗ್ರಾಮದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.62 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 81.45 ರೂಪಾಯಿ ಇದೆ.

ಆದರೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ಸಹ ದೇಶಿಯ ಮಾರುಕಟ್ಟೆಯಲ್ಲಿ ಇಂಧನ ದರದಲ್ಲಿ ಏರಿಕೆಯಾಗುತ್ತಿದ್ದವು. ಈ ವರ್ಷವೇ ಪೆಟ್ರೋಲ್, ಡೀಸೆಲ್ ದರ ಭಾರತದ ವಿವಿಧ ನಗರಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

(petrol price today in Delhi Mumbai Chennai and Bangalore diesel price on 7th April 2021)

Published On - 7:53 am, Wed, 7 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ