ಬೆಂಗಳೂರು: ಪ್ರತಿ ದಿನವೂ ಇಂಧನ ದರವನ್ನು ಪರಿಷ್ಕರಿಸಲಾಗುತ್ತದೆ. ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಏರು-ಪೇರಾದಾಗ ದೇಶಿಯ ಮಾರುಕಟ್ಟೆಯಲ್ಲಿ ಇಂಧನ ದರ ಬದಲಾಗುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತದೆ. ಜೊತೆಗೆ ಇಂಧನ ದರ ಇಳಿಕೆ ಕಂಡಾಗ, ದೇಶಿಯ ಮಾರುಕಟ್ಟೆಯಲ್ಲೂ ಇಳಿಕೆ ಕಾಣುವುದು ಸಾಮಾನ್ಯ ವಿಚಾರ.
ಇಂದು ಬುಧವಾರವೂ ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಏರಿಕೆಯತ್ತ ಸಾಗುತ್ತಿದ್ದಾಗ ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಏರಿತ್ತು. ಆದರೆ ಇಳಿಕೆಯತ್ತ ಮುಖ ಮಾಡುತ್ತಿರುವಾಗ ಎರಡು ದಿನ ಮಾತ್ರ ಇಳಿಕೆ ಕಂಡಿದೆ ಎಂಬುದೊಂದೇ ಗ್ರಾಹಕರ ಪ್ರಶ್ನೆ.
ಮೆಟ್ರೋ ನಗರಗಳಾದ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 90.56 ರೂಪಾಯಿ ಇದೆ. ಹಾಗೆಯೇ ಪ್ರತಿ ಲೀಟರ್ ಡೀಸೆಲ್ ದರ 87.96 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.98 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್ ಡೀಸೆಲ್ 87.96ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲಿಟರ್ ಪೆಟ್ರೋಲ್ಅನ್ನು 90.77 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ ಹಾಗೆಯೇ ಪ್ರತಿ ಲೀಟರ್ ಡೀಸೆಲ್ಅನ್ನು 83.75 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 92.58 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ 85.88 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.75 ರೂಪಾಯಿ ಇದೆ. ಹಾಗೆಯೇ ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 88.20 ರೂಪಾಯಿ ಆಗಿದೆ.
ನೋಯಿಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.33 ರೂಪಾಯಿ ಇದೆ. ಪಂಜಾಬ್ ಮೊಹಾಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.45 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 83.43 ರೂಪಾಯಿ ಇದೆ. ಇನ್ನು, ಛಂಡೀಘಡ್ದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು ಗ್ರಾಹಕರು 87.14 ರೂಪಾಯಿ ಕೊಳ್ಳುತ್ತಿದ್ದು, ಪ್ರತಿ ಲೀಟರ್ ಡೀಸೆಲ್ಅನ್ನು 80.57 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ಹರಿಯಾಣ ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.62 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ದರ 81.45 ರೂಪಾಯಿ ಇದೆ.
ಆದರೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ಸಹ ದೇಶಿಯ ಮಾರುಕಟ್ಟೆಯಲ್ಲಿ ಇಂಧನ ದರದಲ್ಲಿ ಏರಿಕೆಯಾಗುತ್ತಿದ್ದವು. ಈ ವರ್ಷವೇ ಪೆಟ್ರೋಲ್, ಡೀಸೆಲ್ ದರ ಭಾರತದ ವಿವಿಧ ನಗರಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ.
ವಿವಿಧ ನಗರದ ಪೆಟ್ರೋಲ್ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ
https://tv9kannada.com/business/diesel-price-today.html
(petrol price today in Delhi Mumbai Chennai and Bangalore diesel price on 7th April 2021)
Published On - 7:53 am, Wed, 7 April 21