Petrol Price Today: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಏರಿದ ಪೆಟ್ರೋಲ್, ಡೀಸೆಲ್​ ಬೆಲೆ; ದರ ವಿವರ ಇಲ್ಲಿದೆ

Petrol Diesel Rate in Bangalore: ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.60 ರೂ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.81 ರೂ. ಆಗಿದೆ. ಅಮೆರಿಕಾದಲ್ಲಿ ತೈಲ ಬೆಲೆ ಏರಿಕೆ ಕಂಡಿರುವುದರಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ.

Petrol Price Today: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಏರಿದ ಪೆಟ್ರೋಲ್, ಡೀಸೆಲ್​ ಬೆಲೆ; ದರ ವಿವರ ಇಲ್ಲಿದೆ
ಸಂಗ್ರಹ ಚಿತ್ರ
Follow us
shruti hegde
| Updated By: Digi Tech Desk

Updated on:May 05, 2021 | 8:45 AM

ದೆಹಲಿ: ಮೇ ತಿಂಗಳ ಪ್ರಾರಂಭದಲ್ಲಿಯೇ ಪೆಟ್ರೋಲ್​, ಡೀಸೆಲ್​ ದರ ಏರಿಕೆಯತ್ತ ಸಾಗಿದೆ. ಪಂಚ ರಾಜ್ಯಗಳ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ತೈಲ ಬೆಲೆ ಏರಿಕೆಯಾಗದೇ ಸ್ಥಿರವಾಗಿ ಉಳಿದಿತ್ತು. ಇದೀಗ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಪೆಟ್ರೋಲ್​, ಡೀಸೆಲ್​ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಮೇ 4ನೇ ತಾರಿಕು ಮಂಗಳವಾರ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 15 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 18 ಪೈಸೆ ಏರಿಕೆಯಾಗಿದೆ. ಅದೇ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 24 ಪೈಸೆ ಹಾಗೂ ಡೀಸೆಲ್​ ದರ 27 ಪೈಸೆಯಷ್ಟು ಏರಿಕೆಯಾಗಿದೆ. ಇಂದು ಬುಧವಾರ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.55 ರೂ. ಆಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರ 80.91ರೂ. ಆಗಿದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.60 ರೂ. ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.81 ರೂ. ಆಗಿದೆ. ಅಮೆರಿಕಾದಲ್ಲಿ ತೈಲ ಬೆಲೆ ಏರಿಕೆ ಕಂಡಿರುವುದರಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ.

ಪಂಚ ರಾಜ್ಯಗಳ ಚುಣಾವಣಾ ಫಲಿತಾಂಶದ ಬಳಿಕ ಪೆಟ್ರೋಲ್​ನಲ್ಲಿ 2 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 3 ರೂಪಾಯಿ ಏರಿಕೆ ಕಾಣುತ್ತದೆ ಎಂಬ ಮಾಹಿತಿಗಳು ತಿಳಿದು ಬಂದಿದ್ದವು. ಇದಕ್ಕಿಂತಲೂ ಹೆಚ್ಚು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಪ್ರಮುಖ ಮೆಟ್ರೋ ನಗರಗಳಾದ ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.95 ರೂಪಾಯಿ ಇದ್ದರೆ, ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.95 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.76 ರೂಪಾಯಿ ಹಾಗೂ ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.55 ರೂಪಾಯಿ ಆಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 80.91 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 87.98 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 83.78 ರೂ. ಆಗಿದ್ದು, ಚೆನ್ನೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.90 ರೂ. ಆಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:27 am, Wed, 5 May 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್