ದೆಹಲಿ: ಮೇ ತಿಂಗಳ ಪ್ರಾರಂಭದಲ್ಲಿಯೇ ಪೆಟ್ರೋಲ್, ಡೀಸೆಲ್ ದರ ಏರಿಕೆಯತ್ತ ಸಾಗಿದೆ. ಪಂಚ ರಾಜ್ಯಗಳ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ತೈಲ ಬೆಲೆ ಏರಿಕೆಯಾಗದೇ ಸ್ಥಿರವಾಗಿ ಉಳಿದಿತ್ತು. ಇದೀಗ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಮೇ 4ನೇ ತಾರಿಕು ಮಂಗಳವಾರ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 18 ಪೈಸೆ ಏರಿಕೆಯಾಗಿದೆ. ಅದೇ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 24 ಪೈಸೆ ಹಾಗೂ ಡೀಸೆಲ್ ದರ 27 ಪೈಸೆಯಷ್ಟು ಏರಿಕೆಯಾಗಿದೆ. ಇಂದು ಬುಧವಾರ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.55 ರೂ. ಆಗಿದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರ 80.91ರೂ. ಆಗಿದೆ. ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 93.60 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ದರ 85.81 ರೂ. ಆಗಿದೆ. ಅಮೆರಿಕಾದಲ್ಲಿ ತೈಲ ಬೆಲೆ ಏರಿಕೆ ಕಂಡಿರುವುದರಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ.
ಪಂಚ ರಾಜ್ಯಗಳ ಚುಣಾವಣಾ ಫಲಿತಾಂಶದ ಬಳಿಕ ಪೆಟ್ರೋಲ್ನಲ್ಲಿ 2 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆ ಕಾಣುತ್ತದೆ ಎಂಬ ಮಾಹಿತಿಗಳು ತಿಳಿದು ಬಂದಿದ್ದವು. ಇದಕ್ಕಿಂತಲೂ ಹೆಚ್ಚು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಪ್ರಮುಖ ಮೆಟ್ರೋ ನಗರಗಳಾದ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.95 ರೂಪಾಯಿ ಇದ್ದರೆ, ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.95 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.76 ರೂಪಾಯಿ ಹಾಗೂ ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 92.55 ರೂಪಾಯಿ ಆಗಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ದರ 80.91 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 87.98 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 83.78 ರೂ. ಆಗಿದ್ದು, ಚೆನ್ನೈನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 85.90 ರೂ. ಆಗಿದೆ.
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:27 am, Wed, 5 May 21