AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Petrol price in Bengaluru | Diesel Price on 24.05.2022: ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 6 ರೂಪಾಯಿ ಸುಂಕವನ್ನು ಇಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.

Petrol Price Today: ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: May 24, 2022 | 8:02 AM

Share

ಬೆಂಗಳೂರು: ಉಕ್ರೇನ್ – ರಷ್ಯಾ ನಡುವಿನ ಯುದ್ಧದಿಂದ ಭಾರತದಲ್ಲಿ ಇಂಧನ ದರ (Fuel Rate) ಏರಿಕೆಯಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಕಂಡು ಜನರು ಕಂಗಾಲಾಗಿದ್ದರು. ಆದರೆ ಮೇ 21ರಂದು ಕೇಂದ್ರ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 6 ರೂಪಾಯಿ ಸುಂಕವನ್ನು ಇಳಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಇಳಿಕೆಯಾಗಿರುವ ಇಂಧನ ದರ ಸದ್ಯ ಸ್ಥಿರವಾಗಿದೆ. ಇಂದಿನ ಬೆಲೆ ಗಮನಿಸಿದಾಗ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ: * ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 101.96 ರೂ. ಪ್ರತಿ ಲೀಟರ್ ಡೀಸೆಲ್ ದರ 87.89 ರೂಪಾಯಿ ನಿಗದಿಯಾಗಿದೆ. * ದೆಹಲಿ – ಪೆಟ್ರೋಲ್ ದರ 96.72 ರೂ. ಡೀಸೆಲ್ ದರ 89.62 ರೂಪಾಯಿ ಇದೆ. * ಚೆನೈ – ಪೆಟ್ರೋಲ್ ದರ 102.63 ರೂ. ಡೀಸೆಲ್ ದರ 94.24 ರೂಪಾಯಿ ಇದೆ. * ಮುಂಬೈ – ಪೆಟ್ರೋಲ್ ದರ 111.35 ರೂ. ಡೀಸೆಲ್ ದರ 97.28 ರೂಪಾಯಿ ಇದೆ. * ಹೈದಾರಬಾದ್ – ಪೆಟ್ರೋಲ್ ದರ 109.66 ರೂ. ಡೀಸೆಲ್ ದರ 97.82 ರೂಪಾಯಿ ಇದೆ. * ಶ್ರೀನಗರ – ಪೆಟ್ರೋಲ್ ದರ 101.67 ರೂ. ಡೀಸೆಲ್ ದರ 86.82 ರೂಪಾಯಿ ಇದೆ. * ಪಾಟ್ನಾ – ಪೆಟ್ರೋಲ್ ದರ 107.24 ರೂ. ಡೀಸೆಲ್ ದರ 94.04 ರೂಪಾಯಿ ಇದೆ.

ಇದನ್ನೂ ಓದಿ: ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳು ಗಾಯಬ್: ಅಂತರ ರಾಜ್ಯ ದ್ವಿಚಕ್ರವಾಹನ ಕಳ್ಳನ ಬಂಧನ

ಇದನ್ನೂ ಓದಿ
Image
Anti Ageing Food: ವಯಸ್ಸಾಗದಂತೆ ತಡೆಯುವ ಈ ಆಹಾರಗಳು ನಿಮ್ಮ ಡಯಟ್​ನಲ್ಲಿರಲಿ
Image
Fat burn tips: ಭಾರತೀಯ ಈ ದೇಸಿ ಸೂಪರ್‌ಫುಡ್‌ಗಳು ಪೌಷ್ಟಿಕಾಂಶವನ್ನು ಒದಗಿಸುವುದರ ಜೊತೆಗೆ ಕೊಬ್ಬನ್ನು ಕರಗಿಸಲು ಸಹಕಾರಿ
Image
ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳು ಗಾಯಬ್: ಅಂತರ ರಾಜ್ಯ ದ್ವಿಚಕ್ರವಾಹನ ಕಳ್ಳನ ಬಂಧನ
Image
Women’s T20 Challenge 2022: ಪೂಜಾ ಮಾರಕ ದಾಳಿಗೆ ನಲುಗಿದ ಟ್ರೇಲ್‌ಬ್ಲೇಜರ್ಸ್: ಸೂಪರ್‌ನೋವಾಸ್ 49 ರನ್​ಗಳ ಭರ್ಜರಿ ಜಯ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು