AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಸತತ 58 ದಿನಗಳಿಂದ ಪೆಟ್ರೋಲ್​, ಡೀಸೆಲ್​ ದರ ಸ್ಥಿರ; ವರ್ಷಾಂತ್ಯದ ದಿನವೂ ಇಂಧನ ಬೆಲೆಯಲ್ಲಿ ಬದಲಾವಣೆ ಇಲ್ಲ

Petrol Diesel Price Today, 31-12-2021: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

Petrol Rate: ಸತತ 58 ದಿನಗಳಿಂದ ಪೆಟ್ರೋಲ್​, ಡೀಸೆಲ್​ ದರ ಸ್ಥಿರ; ವರ್ಷಾಂತ್ಯದ ದಿನವೂ ಇಂಧನ ಬೆಲೆಯಲ್ಲಿ ಬದಲಾವಣೆ ಇಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Dec 31, 2021 | 8:01 AM

Petrol Diesel Price Today |ದೆಹಲಿ: ಪೆಟ್ರೋಲ್​-ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯೂ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ಅದರಂತೆ ಸರ್ಕಾರಿ ತೈಲ ಕಂಪನಿಗಳು ಇಂದು ಶುಕ್ರವಾರ (ಡಿಸೆಂಬರ್​ 31) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್