AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ ಪರಿಶೀಲಿಸಿ

Petrol Diesel Rate Today: ಕಳೆದ ಮೂರು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್​ ದರ ಕೊಂಚ ಇಳಿಕೆ ಕಂಡಿದೆ. ಮೇ 4ರಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗುತ್ತಿದೆ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 13, 2021 | 9:20 AM

Share

Petrol Diesel Price Today | ದೆಹಲಿ: ಏರುತ್ತಲೇ ಇದ್ದ ಪೆಟ್ರೊಲ್​ ದರ ಇಂದು ವಿರಾಮ ತೆಗೆದುಕೊಂಡಿದೆ. ಇಂದು (ಜುಲೈ 13, ಮಂಗಳವಾರ) ಇಂಧನ ದರದಲ್ಲಿ(Fuel Price) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆ ಪೆಟ್ರೋಲ್​ ದರ (Petrol rate) ಏರಿಕೆ ಕಂಡಿದ್ದು, ಡೀಸೆಲ್​ ದರದಲ್ಲಿ(Diesel Rate) ಕೊಂಚ ಇಳಿಕೆಯಾಗಿತ್ತು. ಇನ್ನೇನು ದಿನ ಕಳೆದಂತೆ ಇಂಧನ ದರ ಇಳಿಕೆ ಕಾಣಬಹುದು ಎಂಬುದು ಗ್ರಾಹಕರ ನಿರೀಕ್ಷೆ. ಆದರೆ ಇಂದು ತೈಲ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಕಳೆದ ಮೂರು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್​ ದರ ಕೊಂಚ ಇಳಿಕೆ ಕಂಡಿದೆ. ಮೇ 4ರಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗುತ್ತಿದೆ. ಜುಲೈ 12ರವರೆಗೆ ಒಟ್ಟು 39 ಬಾರಿ ಹೆಚ್ಚಳ ಮಾಡಲಾಗಿದೆ. ಆ ಮೂಲಕ ಪ್ರಮುಖ ಎಲ್ಲಾ ಮಹಾನಗರಗಳೂ ಸಹ ಗರಿಷ್ಟ ಮಟ್ಟದಲ್ಲಿದೆ. ಮೆಟ್ರೋ ನಗರಗಳೆಲ್ಲವೂ ಲೀಟರ್​ ಪೆಟ್ರೋಲ್​ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ನಿನ್ನೆ ಲೀಟರ್ ಪೆಟ್ರೋಲ್​ ದರದಲ್ಲಿ 28ರಿಂದ 30 ಪೈಸೆ ಹೆಚ್ಚಳ ಮಾಡಲಾಗಿತ್ತು. ಆದರೆ ಲೀಟರ್​ ಡೀಸೆಲ್​ ದರದಲ್ಲಿ 14ರಿಂದ16 ಪೈಸೆ ಕಡಿಮೆ ಮಾಡಲಾಗಿದೆ. ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 101.23 ರೂಪಾಯಿ ಆಗಿತ್ತು. ಲೀಟರ್​ ಡೀಸೆಲ್​ ದರ 89.72 ರೂಪಾಯಿಗೆ ಇಳಿಕೆಯಾಗಿತ್ತು.

ಅದೇ ರೀತಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 107.24 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 97.33 ರೂಪಾಯಿಗೆ ಇಳಿಕೆಯಾಗಿತ್ತು. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ101.39 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 92.86 ರೂಪಾಯಿಗೆ ಇಳಿಕೆ ಆಗಿದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 101.96 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.28 ರೂಪಾಯಿಗೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.58 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 95.09 ರೂಪಾಯಿಗೆ ಇಳಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ