AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ

Petrol Diesel Rate Today: ಎರಡು ದಿನಗಳ ಹಿಂದೆ ಲೀಟರ್​ ಡೀಸೆಲ್​ ದರದಲ್ಲಿ 14ರಿಂದ16 ಪೈಸೆ ಕಡಿಮೆ ಮಾಡಲಾಗಿತ್ತು. ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 101.23 ರೂಪಾಯಿ ಆಗಿತ್ತು. ಲೀಟರ್​ ಡೀಸೆಲ್​ ದರ 89.72 ರೂಪಾಯಿಗೆ ಇಳಿಕೆಯಾಗಿತ್ತು. ಇಂದು ಸಹ ಇದೇ ದರವನ್ನು ಕಾಯ್ದಿರಿಸಿಕೊಂಡಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ
ಪಿಟಿಐ ಚಿತ್ರ
TV9 Web
| Edited By: |

Updated on:Jul 14, 2021 | 9:01 AM

Share

Petrol Diesel Price Today | ದೆಹಲಿ: ಏರುತ್ತಲೇ ಇರುವ ಪೆಟ್ರೋಲ್​ ದರ ಇಂದು ( ಜುಲೈ 14, ಬುಧವಾರ) ವಿರಾಮ ತೆಗೆದುಕೊಂಡಿದೆ. ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್​ (Petrol rate) ಮತ್ತು ಡೀಸೆಲ್​ ಬೆಲೆಯಲ್ಲಿ (Diesel Rate) ಯಾವುದೇ ಬದಲಾವಣೆ ಮಾಡಿಲ್ಲ. ನಿನ್ನೆ ಕೂಡ ಇಂಧನ ದರ(Fuel Price) ಬದಲಾಗದೇ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಎರಡು ದಿನಗಳ ಹಿಂದಷ್ಟೇ ಡೀಸೆಲ್​ ದರ ಕೊಂಚ ಇಳಿಕೆ ಕಾಂಡಿದ್ದು ವಾಹನ ಸವಾರರಿಗೆ ಕೊಂಚ ಸಮಾಧಾನವಾಗಿತ್ತು. ಅದರ ಬಳಿಕ ತೈಲ ದರದಲ್ಲಿ ಯಾವುದೇ ಏರು-ಪೇರು ಕಂಡು ಬಂದಿಲ್ಲ.

ಮೇ 4ರಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗುತ್ತಿದೆ. ಇಂದಿನವರೆಗೆ ಒಟ್ಟು 39 ಬಾರಿ ಹೆಚ್ಚಳ ಮಾಡಲಾಗಿದೆ. ಒಂದು ಬಾರಿ ಮಾತ್ರ ಡೀಸೆಲ್​ ದರ ಇಳಿಕೆ ಕಂಡಿದೆ. ಮೆಟ್ರೋ ನಗರಗಳೆಲ್ಲವೂ ಲೀಟರ್​ ಪೆಟ್ರೋಲ್​ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಎರಡು ದಿನಗಳ ಹಿಂದೆ ಲೀಟರ್​ ಡೀಸೆಲ್​ ದರದಲ್ಲಿ 14ರಿಂದ16 ಪೈಸೆ ಕಡಿಮೆ ಮಾಡಲಾಗಿತ್ತು. ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 101.23 ರೂಪಾಯಿ ಆಗಿತ್ತು. ಲೀಟರ್​ ಡೀಸೆಲ್​ ದರ 89.72 ರೂಪಾಯಿಗೆ ಇಳಿಕೆಯಾಗಿತ್ತು. ಇಂದು ಸಹ ಇದೇ ದರವನ್ನು ಕಾಯ್ದಿರಿಸಿಕೊಂಡಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.58 ರೂಪಾಯಿ ಇದೆ ಹಾಗೂ ಲೀಟರ್​ ಡೀಸೆಲ್​ ದರ 95.09 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 101.96 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.28 ರೂಪಾಯಿ ಇದೆ.

ಅದೇ ರೀತಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 107.24 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 97.33 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ101.39 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 92.86 ರೂಪಾಯಿಗೆ ಇಳಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:55 am, Wed, 14 July 21

Follow Us
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ